Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯು ಪ್ರಿಪರೇಟರಿ, ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

PUC Exams Time Table: ದ್ವಿತೀಯ ಪಿಯು ಪ್ರಿಪರೇಟರಿ ಮತ್ತು ಪ್ರಥಮ ಪಿಯುಸಿಯ ವಾರ್ಷಿಕ ಪರೀಕ್ಷೆಯ ದಿನಾಂಕ ನಿಗದಿಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಥಮಿ ಪಿಯುಸಿ ವೇಳಾಪಟ್ಟಿ ಪ್ರಕಟವಾಗಿದ್ದು, ಅದು ಈ ಕೆಳಗಿನಂತಿದೆ.

ದ್ವಿತೀಯ ಪಿಯು ಪ್ರಿಪರೇಟರಿ, ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Dec 28, 2023 | 9:53 PM

ಬೆಂಗಳೂರು, (ಡಿಸೆಂಬರ್ 28): ದ್ವಿತೀಯ ಪಿಯುಸಿ (Second PUC)  ಪ್ರಿಪರೇಟರಿ ಮತ್ತು ಪ್ರಥಮ ಪಿಯುಸಿಯ(First PUC) ಅಂತಿಮ ಪರೀಕ್ಷೆಯ ವೇಳಾಪಟ್ಟಿ (Exam Time Table) ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, 2024ರ ಫೆ.13ರಿಂದ 28ರ ವರೆಗೆ ನಡೆಯಲಿವೆ. ಇನ್ನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾ ಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ಜನವರಿ 16ರಿಂದ 30ರ ನಡುವೆ ಜಿಲ್ಲಾಮಟ್ಟದಲ್ಲಿ ನಡೆಸಲು ಸೂಚನೆ ನೀಡಲಾಗಿದೆ.

ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ

ಫೆಬ್ರುವರಿ.13- ಕನ್ನಡ, ಅರೇಬಿಕ್, ಫೆ.14- ಹಿಂದಿ, ಫೆ.15- ರಾಜ್ಯಶಾಸ, ಸಂಖ್ಯಾಶಾಸ, ಫೆ.16- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆೃಂಡ್ ವೆಲ್‌ವೆಸ್, ಫೆ.17- ಐಚ್ಛಿಕ ಕನ್ನಡ, ಲೆಕ್ಕಶಾಸ, ಭೂಗರ್ಭಶಾಸ, ಗೃಹ ವಿಜ್ಞಾನ, ಫೆ.19- ಇತಿಹಾಸ, ಭೌತಶಾಸ, ಫೆ.20- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ್ರೆಂಚ್, ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ, ರಸಾಯನಶಾಸ, ಮೂಲ ಗಣಿತ, ಫೆ.22- ತರ್ಕಶಾಸ, ವ್ಯವಹಾರ ಅಧ್ಯಯನ, ಫೆ 23- ಗಣಿತ, ಶಿಕ್ಷಣ ಶಾಸ, ಫೆ.24- ಅರ್ಥಶಾಸ, ಫೆ.26- ಸಮಾಜಶಾಸ, ವಿದ್ಯುನ್ಮಾನಶಾಸ, ಗಣಕ ವಿಜ್ಞಾನ, ಫೆ.27- ಇಂಗ್ಲಿಷ್, ಫೆ.28- ಭೂಗೋಳಶಾಸ ಮತ್ತು ಜೀವಶಾಸ ಪರೀಕ್ಷೆಗಳು ನಡೆಯಲಿವೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ, SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇನ್ನು ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. 80 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನವಿರಲಿದೆ.

ಸೆಕೆಂಡ್ ಪಿಯು ಪ್ರಿಪರೇಟರಿ ಪರೀಕ್ಷೆ ಸೂಚನೆಗಳು

  • ಆಯಾ ಜಿಲ್ಲೆಗಳ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಜಿಲ್ಲಾ ಮಟ್ಟದಲ್ಲಿ ವೇಳಾ ಪಟ್ಟಿ ಸಿದ್ಧಪಡಿಸಿ ಪ್ರಿಪರೇಟರಿ ಪರೀಕ್ಷೆ ನಡೆಸುವುದು.
  • ಮಂಡಳಿಯ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 80 ಅಂಕಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವುದು.
  • ಈಗಾಗಲೇ ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವ ಮಾದರಿ ಪ್ರಶ್ನೆಪತ್ರಿಕೆಗಳು ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆಪತ್ರಿಕಾ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರನ್ನು ಬಳಸಿಕೊಂಡು ಸಿದ್ಧಪಡಿಸುವುದು.
  • ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯಕ್ಕನುಗುಣವಾಗಿ ಪಶ್ನೆಪತ್ರಿಕೆಗಳನ್ನು ವಿತರಿಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ:16-01-2024 30-01-2024 ರವರೆಗೆ ನಡೆಸುವುದು.
  • ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಪರೀಕ್ಷಾ ಗೌಪ್ಯತೆಯೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮ ವಹಿಸುವುದು.

ಇನ್ನಷ್ಟು ಶಿಕ್ಷಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ
‘ಮಕ್ಕಳು ಬೆಳೆದ್ವಾ?’; ಕುರಿ ಪ್ರತಾಪ್ ಪ್ರಶ್ನಗೆ ಡಾಲಿ ಧನಂಜಯ್ ಶಾಕ್
‘ಮಕ್ಕಳು ಬೆಳೆದ್ವಾ?’; ಕುರಿ ಪ್ರತಾಪ್ ಪ್ರಶ್ನಗೆ ಡಾಲಿ ಧನಂಜಯ್ ಶಾಕ್
ಬೆಂಗಳೂರು ಹೊರವಲಯಗಳಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ
ಬೆಂಗಳೂರು ಹೊರವಲಯಗಳಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ
ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್
ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್
Daily Devotional: ಉದ್ಯೋಗ ಸಿಗುತ್ತಿಲ್ಲವಾ? ಇಲ್ಲಿದೆ ಪರಿಹಾರ ಮಂತ್ರ
Daily Devotional: ಉದ್ಯೋಗ ಸಿಗುತ್ತಿಲ್ಲವಾ? ಇಲ್ಲಿದೆ ಪರಿಹಾರ ಮಂತ್ರ
Daily Horoscope: ಈ ರಾಶಿಯವರಿಗೆ ಕೆಲಸದಲ್ಲಿ ಜಯ ಮತ್ತು ಧನಯೋಗ
Daily Horoscope: ಈ ರಾಶಿಯವರಿಗೆ ಕೆಲಸದಲ್ಲಿ ಜಯ ಮತ್ತು ಧನಯೋಗ
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್