Second PUC Results 2021: ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ವೆಬ್​ಸೈಟ್​ನಲ್ಲಿ ಲಭ್ಯ

Karnataka 2nd PUC 2021 Results: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

Second PUC Results 2021: ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ವೆಬ್​ಸೈಟ್​ನಲ್ಲಿ ಲಭ್ಯ
ಸಾಂಕೇತಿಕ ಚಿತ್ರ
Follow us
| Updated By: Skanda

Updated on:Jul 16, 2021 | 11:55 AM

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು (Second PUC Results 2021) ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಬಿಎಸ್‌ಇ ಮಾದರಿಯಲ್ಲಿ ಎಸ್ಎಸ್‌ಎಲ್‌ಸಿ, ಪಿಯು ಅಂಕ ಪರಿಗಣಿಸಿ ಫಲಿತಾಂಶ (Result) ನೀಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಫಲಿತಾಂಶ ಹೊರಬೀಳಲಿದ್ದು, ಜುಲೈ 20 ರಂದು ವೆಬ್‌ಸೈಟ್‌ನಲ್ಲಿ (Website) ಫಲಿತಾಂಶ ಪ್ರಕಟವಾಗಲಿದೆ.

ಫಲಿತಾಂಶದ ಬಗ್ಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಈ ಬಾರಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವ್ಯವಸಸ್ಥಿತವಾಗಿ ಫಲಿತಾಂಶ ನೀಡಲಾಗುವುದು ಎಂದು ಹೇಳಿದೆ. ಈ ಬಾರಿ ಯಾವುದೇ ರ್ಯಾಂಕ್‌ ಇರುವುದಿಲ್ಲ. ಗ್ರೇಡ್ ಬದಲು, ಅಂಕಗಳ ಆಧಾರದಲ್ಲೇ ಫಲಿತಾಂಶವಿರಲಿದೆ. ಸಿಬಿಎಸ್‌ಇ ಮಾದರಿಯಲ್ಲಿ ಎಸ್ಎಸ್​ಎಲ್‌ಸಿ, ಪಿಯು ಅಂಕ ಪರಿಗಣಿಸಿ ಪ್ರಕಟಿಸಲಾಗುವುದು. ಎಸ್ಎಸ್​ಎಲ್‌ಸಿ ಮೊದಲ ಪರೀಕ್ಷೆ ಮರುದಿನವೇ ಪಿಯು ಫಲಿತಾಂಶ ನೀಡಲು ನಿರ್ಧರಿಸಲಾಗಿದ್ದು, ವೆಬ್​ಸೈಟ್​ನಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದೆ.

ಫಲಿತಾಂಶ ನೋಡುವುದು ಹೇಗೆ? ಆದರೆ, ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್​ ಸ್ಪಷ್ಟನೆ ನೀಡಿದೆ. ಪ್ರತಿ ವರ್ಷ ಪರೀಕ್ಷೆ‌ಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ‌ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್‌ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. Know my number ಆಯ್ಕೆಯನ್ನು ಪಿಯು ವೆಬ್​ಸೈಟ್ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಎಸ್​ಎಂಸ್​ ಮೂಲಕ ತಿಳಿಸುವುದರೊಂದಿಗೆ ಆಯಾ ಕಾಲೇಜಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ. ಫಲಿತಾಂಶ ಮುನ್ನ ತಮ್ಮ ರಿಜಿಸ್ಟರ್‌ ನಂಬರನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಅನ್ನು ಚೆಕ್‌ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್​ಸೈಟ್ ಮೂಲಕ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಲ್ಲಿ ಆತಂಕ: ಪರೀಕ್ಷೆಗೆ ಹಾಲ್ ಟಿಕೆಟ್ ಸಿಗದೆ 11 ವಿದ್ಯಾರ್ಥಿಗಳು ಕಂಗಾಲು

Published On - 11:27 am, Fri, 16 July 21

ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ