AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Time Table 2024: ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ವೇಳಾ ಪಟ್ಟಿ ಪ್ರಕಟ

Karnataka 2nd PUC Exam Time Table 2024: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ.

Karnataka 2nd PUC Time Table 2024: ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ವೇಳಾ ಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
| Updated By: Digi Tech Desk|

Updated on:Feb 14, 2024 | 2:59 PM

Share

ಬೆಂಗಳೂರು, ಜನವರಿ 17: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ್ಟಿಸಿತ್ತು, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ, ದಿನಾಂಕ ಹೀಗಿದೆ 

  • 01-03-2024: ಕನ್ನಡ ಹಾಗೂ ಅರೇಬಿಕ್
  • 04-03-2024: ಗಣಿತ
  • 05-03-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
  • 06-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
  • 07-03-2024: ಇತಿಹಾಸ ಹಾಗೂ ಭೌತಶಾಸ್ತ್ರ
  • 09-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
  • 11-03-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 13-03-2024: ಇಂಗ್ಲಿಷ್
  • 15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
  • 16-03-2024: ಅರ್ಥಶಾಸ್ತ್ರ
  • 18-03-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
  • 20-03-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 22-03-2024: ಹಿಂದಿ

ನೀವೀಗ ಅಭ್ಯಾಸ ಆರಂಭಿಸಲೇ ಬೇಕು

ಪರೀಕ್ಷೆ ದಿನಕ್ಕೆ ಯಾವುದೆಲ್ಲಾ ತಯಾರಿ ಬೇಕು ಅದನ್ನು ಇಂದಿನಿಂದಲೇ ಆರಂಭಿಸಿ. ಉತ್ತಮ ಅಂಕಗಳಿಸಿ. ಮುಖ್ಯವಾಗಿ ಪರೀಕ್ಷೆ ಬಂತೆಂದು ಭಯಪಡಬೇಡಿ. ರಾಜ್ಯದಲ್ಲಿ 2024ರ PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ನೀವೀಗ ಅಭ್ಯಾಸ ಆರಂಭಿಸಲೇ ಬೇಕು. ಅದಕ್ಕಾಗಿ ನೀವು ಕೆಲವೊಂದು ಟಿಪ್ಸ್​ ಪಾಲೋ ಮಾಡಿದರೆ ಹೆಚ್ಚಿನ ಅಂಕ ಬರುವುದು ಗ್ಯಾರಂಟಿ. ಎಲ್ಲಕ್ಕಿಂತ ಮುಖ್ಯವಾಗಿ ನೀವು ಹೆದರದೆ ಈಗಿನಿಂದಲೇ ದಿನಕ್ಕೊಂದು ವಿಷಯದಂತೆ ಓದುತ್ತಾ ಹೋದರೆ ಸಾಕು. 80ಕ್ಕಿಂತ ಹೆಚ್ಚಿನ ಅಂಕ ಗಳಿಸಬಹುದು ಇದು ನಿಖರ

ಇಲ್ಲಿ ನೀಡಿರುವ ದಿನಾಂಕದ ಪ್ರಕಾರ ಪರೀಕ್ಷೆ ನಡೆಯಲಿದೆ

ಮೇಲೆ ಕ್ರಮವಾಗಿ ಪರೀಕ್ಷಾ ದಿನಾಂಕಗಳನ್ನು ನೀಡಲಾಗಿದೆ. ಇಲ್ಲಿ ನೀಡಿರುವ ದಿನಾಂಕದ ಪ್ರಕಾರ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಸಿದ್ಧತೆ ನಡೆಸಬೇಕು. ವೇಳಾಪಟ್ಟಿಗೆ ಅನುಗುಣವಾಗಿ ಸಿದ್ಧತೆ ನಡೆಸುತ್ತಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನವದ ಅತಿ ಮುಖ್ಯ ಘಟ್ಟ ಇದರ ನಂತರ ತಾವೂ ಯಾವ ಕ್ಷೇತ್ರವನ್ನು ಆಯ್ಕೆ ಮಾಡಬೇಕು ಎಂಬ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ.

ಶೈಕ್ಷಣಿಕ ವರ್ಷದ ಆರಂಭದಿಂದಲೇ ಅಭ್ಯಾಸ ಮಾಡಿ

ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ತಮ್ಮ ಪರೀಕ್ಷಾ ಸಿದ್ಧತೆಗಳನ್ನು ಪ್ರಾರಂಭಿಸಬೇಕು. ತರಗತಿಯ ವಿಷಯಗಳೊಂದಿಗೆ ಏಕಕಾಲದಲ್ಲಿ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಹಾಯವಾಗುತ್ತದೆ.

ಓದಿದ ವಿಷಯವನ್ನು ಇನ್ನೊಮ್ಮೆ ಓದಿ ಅಭ್ಯಾಸ ಮಾಡಲು ಸಾಕಷ್ಟು ಸಮಯವನ್ನು ಹೊಂದಿರುವುದು ಮತ್ತು ಇತರೆ ವಿಷಯಗಳಲ್ಲಿನ ಸಂಶಯಗಳನ್ನು ಉಪನ್ಯಾಸಕರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಲು ನೆರವಾಗುತ್ತದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Wed, 17 January 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ