ಬೆಂಗಳೂರು, ಜನವರಿ 17: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ್ಟಿಸಿತ್ತು, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪರೀಕ್ಷೆ ದಿನಕ್ಕೆ ಯಾವುದೆಲ್ಲಾ ತಯಾರಿ ಬೇಕು ಅದನ್ನು ಇಂದಿನಿಂದಲೇ ಆರಂಭಿಸಿ. ಉತ್ತಮ ಅಂಕಗಳಿಸಿ. ಮುಖ್ಯವಾಗಿ ಪರೀಕ್ಷೆ ಬಂತೆಂದು ಭಯಪಡಬೇಡಿ. ರಾಜ್ಯದಲ್ಲಿ 2024ರ PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ನೀವೀಗ ಅಭ್ಯಾಸ ಆರಂಭಿಸಲೇ ಬೇಕು. ಅದಕ್ಕಾಗಿ ನೀವು ಕೆಲವೊಂದು ಟಿಪ್ಸ್ ಪಾಲೋ ಮಾಡಿದರೆ ಹೆಚ್ಚಿನ ಅಂಕ ಬರುವುದು ಗ್ಯಾರಂಟಿ. ಎಲ್ಲಕ್ಕಿಂತ ಮುಖ್ಯವಾಗಿ ನೀವು ಹೆದರದೆ ಈಗಿನಿಂದಲೇ ದಿನಕ್ಕೊಂದು ವಿಷಯದಂತೆ ಓದುತ್ತಾ ಹೋದರೆ ಸಾಕು. 80ಕ್ಕಿಂತ ಹೆಚ್ಚಿನ ಅಂಕ ಗಳಿಸಬಹುದು ಇದು ನಿಖರ
ಮೇಲೆ ಕ್ರಮವಾಗಿ ಪರೀಕ್ಷಾ ದಿನಾಂಕಗಳನ್ನು ನೀಡಲಾಗಿದೆ. ಇಲ್ಲಿ ನೀಡಿರುವ ದಿನಾಂಕದ ಪ್ರಕಾರ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಸಿದ್ಧತೆ ನಡೆಸಬೇಕು. ವೇಳಾಪಟ್ಟಿಗೆ ಅನುಗುಣವಾಗಿ ಸಿದ್ಧತೆ ನಡೆಸುತ್ತಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನವದ ಅತಿ ಮುಖ್ಯ ಘಟ್ಟ ಇದರ ನಂತರ ತಾವೂ ಯಾವ ಕ್ಷೇತ್ರವನ್ನು ಆಯ್ಕೆ ಮಾಡಬೇಕು ಎಂಬ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ.
ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ತಮ್ಮ ಪರೀಕ್ಷಾ ಸಿದ್ಧತೆಗಳನ್ನು ಪ್ರಾರಂಭಿಸಬೇಕು. ತರಗತಿಯ ವಿಷಯಗಳೊಂದಿಗೆ ಏಕಕಾಲದಲ್ಲಿ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಹಾಯವಾಗುತ್ತದೆ.
ಓದಿದ ವಿಷಯವನ್ನು ಇನ್ನೊಮ್ಮೆ ಓದಿ ಅಭ್ಯಾಸ ಮಾಡಲು ಸಾಕಷ್ಟು ಸಮಯವನ್ನು ಹೊಂದಿರುವುದು ಮತ್ತು ಇತರೆ ವಿಷಯಗಳಲ್ಲಿನ ಸಂಶಯಗಳನ್ನು ಉಪನ್ಯಾಸಕರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಲು ನೆರವಾಗುತ್ತದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:11 pm, Wed, 17 January 24