Karnataka Second PU Exams: ಸೆಕೆಂಡ್ ಪಿಯುಸಿ ಪರೀಕ್ಷೆಗೆ ಕೌಂಟ್ಡೌನ್, ಪರೀಕ್ಷೆಗೆ ಹಿಜಾಬ್ ಧರಿಸಿದ್ರೆ ನೋ ಎಂಟ್ರಿ

ನಾಳೆಯಿಂದ ಅಂದರೆ ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪಿಯುಸಿ ಪರೀಕ್ಷೆ ಇರಲಿದೆ.

Karnataka Second PU Exams: ಸೆಕೆಂಡ್ ಪಿಯುಸಿ ಪರೀಕ್ಷೆಗೆ ಕೌಂಟ್ಡೌನ್, ಪರೀಕ್ಷೆಗೆ ಹಿಜಾಬ್ ಧರಿಸಿದ್ರೆ ನೋ ಎಂಟ್ರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Apr 21, 2022 | 7:59 AM

ಬೆಂಗಳೂರು: ಸೆಕೆಂಡ್ ಪಿಯುಸಿ ಪರೀಕ್ಷೆಗೆ ಕೌಂಟ್ಡೌನ್ ಶುರುವಾಗಿದೆ. ನಾಳೆಯಿಂದ ಅಂದರೆ ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪಿಯುಸಿ ಪರೀಕ್ಷೆ ಇರಲಿದೆ. 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಎಕ್ಸಾಂ ಬರೆಯಲಿದ್ದಾರೆ. ಈ ವರ್ಷದ ಪರೀಕ್ಷಾ ವೇಳಾಪಟ್ಟಿ ನಾನಾ ಕಾರಣಗಳಿಂದ ಹಲವು ಸಲ ಬದಲಾವಣೆ ಆಗಿತ್ತು. ಆದ್ರೆ ಕೆಲ ದಿನಗಳ ಹಿಂದಷ್ಟೇ ವೇಳಾಪಟ್ಟಿ ಅಂತಿಮಗೊಳಿಸಿದ್ದು, ಏಪ್ರಿಲ್ 22 ರಿಂದ ಮೇ 18ರವರೆಗೆ ಎಕ್ಸಾಂ ನಡೆಯಲಿದೆ.

3,46,936 ವಿದ್ಯಾರ್ಥಿಗಳು, 3,37,319 ವಿದ್ಯಾರ್ಥಿನಿಯರು, 6,00,519 ರೆಗ್ಯುಲರ್ ವಿದ್ಯಾರ್ಥಿಗಳು, 61,808 ಪುನರಾವರ್ತಿತರು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 21,928 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 2,28,167 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 2,45,519 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಎಕ್ಸಾಂಗೆ ಹಾಜರಾಗಲಿದ್ದಾರೆ. ಒಟ್ಟು 5,241 ಕಾಲೇಜುಗಳಿಂದ ದ್ವಿತೀಯ ಪಿಯು ಪರೀಕ್ಷೆಗೆ ನೋಂದಣಿ ಮಾಡಕೊಳ್ಳಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಪರೀಕ್ಷಾ ಕೇಂದ್ರದ ಬಳಿಯ ಜೆರಾಕ್ಸ್ ಅಂಗಡಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿಸಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಪರೀಕ್ಷೆ ಸಂಬಂಧ ಸಹಾಯವಾಣಿ ಬಿಡುಗಡೆಗಡೆ ಮಾಡಲಾಗಿದೆ ಸಂಖ್ಯೆ 080 23080864 ಮೂಲಕ ಪರೀಕ್ಷೆ ಸಂಬಂಧ ಯಾವುದೇ ಸಮಸ್ಯೆ ಇದ್ದರೂ ಕರೆ ಮಾಡಿ ಮಾತನಾಡಬಹುದು. 2020-21ರಲ್ಲಿ ಕೊರೊನಾ ಹಿನ್ನೆಲೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿದ್ದರು. ಈ ವರ್ಷ ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಸರಳೀಕೃತಗೊಳಿಸಿದೆ. SSLC ಮಾದರಿಯಲ್ಲೇ ಸರಳ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ.

ಸಮವಸ್ತ್ರ ನಿಯಮ ಕಡ್ಡಾಯ, ಹಿಜಾಬ್ ಧರಿಸಿದ್ರೆ ನೋ ಎಂಟ್ರಿ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದದ ನೆರಳು ದ್ವಿತೀಯ ಪಿಯುಸಿ ಎಕ್ಸಾಂ ಮೇಲೂ ಬೀಳುವ ಆಂತಕ ಎದುರಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ನಿಯಮವನ್ನು ಪಾಲಿಸಬೇಕು ಅಂತಾ ಸುತ್ತೋಲೆ ಹೊರಡಿಸಿದೆ. ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ. ಆಯಾ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿದ ಸಮವಸ್ತ್ರ ಪಾಲನೆ ಕಡ್ಡಾಯ. ಸಮವಸ್ತ್ರವಿಲ್ಲದ ಕಡೆ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸುವಂತಿಲ್ಲ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಧಾರ್ಮಿಕ ಉಡುಪಿಗೆ ಅವಕಾಶವಿಲ್ಲ. ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಿಲ್ಲ.

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

ಇದನ್ನೂ ಓದಿ: ಬಗೆದಷ್ಟೂ ಬಯಲಾಗುತ್ತಿದೆ ಪಿಎಸ್ಐ ನೇಮಕಾತಿ ಅಕ್ರಮ; ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆ