AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಲೈಂಗಿಕ ಶಿಕ್ಷಣ, ಸಿಡಿದೆದ್ದ ಹಿಂದೂ ಸಂಘಟನೆಗಳು

ಈ ಹಿಂದೆ ರಾಜಧಾನಿ ಬೆಂಗಳೂರಿನ ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಕಾಂಡೋಮ್ ಪತ್ತೆಯಾಗಿದ್ದು, ಇದು ಇಡೀ ಶಿಕ್ಷಣ ಕ್ಷೇತ್ರವನ್ನು ಬೆಚ್ಚಿ ಬೀಳಿಸಿತ್ತು. ಮಕ್ಕಳು ಯಾವ ಕಡೆ ಸಾಗುತ್ತಿದ್ದಾರೆ ಎನ್ನುವ ಚರ್ಚೆಯ ಮಧ್ಯೆ ಈಗ ಶಿಕ್ಷಣ ಇಲಾಖೆ ನೈತಿಕ ಪಠ್ಯದಡಿ ಲೈಂಗಿಕ ಶಿಕ್ಷಣ ಜಾರಿಗೆ ಶಾಲಾ ಮುಂದಾಗಿದೆ. ಆದ್ರೆ, ಇದಕ್ಕೆ ಹಿಂದೂಪರ ಸಂಘನಟೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಲೈಂಗಿಕ ಶಿಕ್ಷಣ, ಸಿಡಿದೆದ್ದ ಹಿಂದೂ ಸಂಘಟನೆಗಳು
Sexual Education
Vinay Kashappanavar
| Updated By: ರಮೇಶ್ ಬಿ. ಜವಳಗೇರಾ|

Updated on: Jun 08, 2025 | 10:35 AM

Share

ಬೆಂಗಳೂರು, (ಜೂನ್ 08): ಕರ್ನಾಟಕದಲ್ಲಿ (Karnataka) ಪ್ರಸ್ತಕ ವರ್ಷದಿಂದಲೇ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆಗೆ ಶಿಕ್ಷಣ ಇಲಾಖೆ (Karnataka Education Department) ಮುಂದಾಗಿದೆ. ನೈತಿಕ ಪಠ್ಯದಡಿ ಲೈಂಗಿಕ ಶಿಕ್ಷಣ ಪರಿಚಯಿಸಲು ಸರ್ಕಾರ ಮುಂದಗಿದೆ ಮಕ್ಕಳ ತರಗತಿ ಹಾಗೂ ವೈಯೋಮಾನಕ್ಕೆ ತಕ್ಕಂತೆ DSERTಯಿಂದ ಲೈಂಗಿಕ ಶಿಕ್ಷಣ (sexual education) ಪಠ್ಯ ಸಿದ್ಧ ಮಾಡಲಾಗಿದ್ದು, ಪ್ರಾರಂಭಿಕ ಹಂತದಲ್ಲಿ 8 ರಿಂದ 12 ನೇ ತರಗತಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಲು‌ ಸರ್ಕಾರ ಪ್ಲಾನ್ ಮಾಡಿತ್ತು. ಈಗ DSERT ವಯೋಮಿತಿ ಅನುಗುಣವಾಗಿ ನೈತಿಕ ಪಠ್ಯದಡಿ ಲೈಂಗಿಕ ಪಠ್ಯ ಪರಿಚಯಿಸಲು ಮುಂದಾಗಿದೆ. ಯಾವ ವಯೋಮಿತಿಗೆ ಏನೆಲ್ಲ ನೈತಿಕ ಪಠ್ಯ ಅವಶ್ಯಕತೆ ಇದೆ. ವಾರಕ್ಕೆ ಎಷ್ಟು ತರಗತಿಗಳು ಬೇಕು ಎಂದು DSERT ಪ್ರತ್ಯೇಕ ಪಠ್ಯ ನೀಡಲು ಮುಂದಾಗಿದ್ದು, ಇದೇ ವರ್ಷದಿಂದ ಲೈಂಗಿಕ ಶಿಕ್ಷಣವು ಶುರುವಾಗಲಿದೆ.

ಈ ವರ್ಷದಿಂದಲೇ ಲೈಂಗಿಕ ಶಿಕ್ಷಣ

ಪ್ರಾರಂಭದಲ್ಲಿ ವಾರಕ್ಕೆ ಎರಡು ತರಗತಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸಲು ಈ ಕ್ರಮಕ್ಕೆ ಮುಂದಾಗಿದ್ದು, ಎರಡು ಅವಧಿಯಲ್ಲಿ ನೈತಿಕ ಮೌಲ್ಯದ ಶಿಕ್ಷಣ ಬೋಧನೆ ಮೂಲಕ ಮಕ್ಕಳಲ್ಲಿ ಲೈಂಗಿಕ ಶಿಕ್ಷಣದ ತಿಳವಳಿಕೆ ನೀಡಲು ಮುಂದಾಗಿದೆ . ಮಕ್ಕಳ ವಯಸ್ಸಿಗೆ ಅನುಗುಣವಾಗಿ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳು, ಸಹಜವಾಗಿ ಆಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳು, ಅವುಗಳೆಲ್ಲವನ್ನೂ ಸಹಜ ರೀತಿಯಲ್ಲಿ ಸ್ವೀಕರಿಸುವ ಮತ್ತು ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಲೈಂಗಿಕ ಶಿಕ್ಷಣ ನೀಡಲು ಇಲಾಖೆ ಪ್ಲಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈಸೇರಿಲ್ಲ ಪಠ್ಯ ಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ಶಾಲೆಗಳಲ್ಲಿ ನೈತಿಕ ಶಿಕ್ಷಣದ ಅಡಿಯಲ್ಲಿ ಲೈಂಗಿಕ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ‌ ಮುಂದಾಗಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗಿವೆ. ಶಿಕ್ಷಣ ಇಲಾಖೆಯ ಈ ನಡೆ ಈಗ ಹಿಂದೂಪರ ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
ಕೊರೊನಾ ಅಬ್ಬರ...ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್
Image
ವಿದೇಶದಲ್ಲಿ ಓದುವವರೇ ಈ ವಿಷ್ಯ ಗೊತ್ತಿಲ್ಲದಿದ್ದರೆ ಮೋಸ ಹೋಗುವುದು ಖಂಡಿತಾ
Image
ಅತ್ಯಂತ ಕಡಿಮೆ ಸಮಯದಲ್ಲಿ ಪರೀಕ್ಷೆಗೆ ತಯಾರಿ ನಡೆಸುವುದು ಹೇಗೆ?
Image
ಮರಳಿ ಶಾಲೆಗೆ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ, ಇಲ್ಲಿವೆ ಫೋಟೋಸ್

ಒಟ್ಟಿನಲ್ಲಿ ಬದಲಾದ ಆಹಾರ ಪದ್ಧತಿ, ಅತಿಯಾದ ಮೊಬೈಲ್ ಬಳಕೆ ಸೇರಿದಂತೆ ಹಲವು ಕಾರಣಗಳಿಂದ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಹಾರ್ಮೋನ್ ಇಂಬ್ಯಾಲೆನ್ಸ್ ನಿಂದ ಸೆಕ್ಸ್ ಮೆಚ್ಯುರಿಟಿ ಬೇಗ ಆಗುತ್ತಿದೆ. ಈ ಹೊತ್ತಿನಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಅಗತ್ಯತೆ ಇದೇನಾ ಎಂದು ಹಿಂದೂಪರ ಸಂಘಟನೆಗಳು ಕಿಡಿಕಾರಿದ್ದು, ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಪರ ವಿರೋಧಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ