AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಟಾಪರ್ಸ್​ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ

ಈ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. 625ಕ್ಕೆ 625 ಅಂಕ ಪಡೆಯುವ ಮೂಲಕ ಇಡೀ ನಾಡಿಗೆ ಕೀರ್ತಿ ತಂದಿದ್ದಾರೆ. ಅಂಕಿತಾ ಅವರ ಈ ಸಾಧನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಅಲ್ಲದೇ ಅಂಕಿತಾಗೆ ಹಾಗೂ ಆಕೆ ಓದಿದ ಶಾಲೆಗೆ ಸಿಎಂ ಬಂಪರ್​ ಗಿಫ್ಟ್​ ಘೋಷಿಸಿದ್ದಾರೆ.

SSLC ಟಾಪರ್ಸ್​ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ
ರಮೇಶ್ ಬಿ. ಜವಳಗೇರಾ
|

Updated on: May 14, 2024 | 10:14 PM

Share

ಬೆಂಗಳೂರು, (ಮೇ 14): ಈ ವರ್ಷದ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ (625ಕ್ಕೆ 625 ಅಂಕ ) ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. ಇನ್ನು ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿದ್ದಾರೆ. ಈ ಮೂಲಕ ಇಡೀ ನಾಡಿಗೆ ಕೀರ್ತಿ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ಸನ್ಮಾನಿಸಿ ಅಭಿನಂದನೆ ತಿಳಿಸಿದ್ದಾರೆ. ಅಲ್ಲದೇ ಇವರಿಬ್ಬರಿಗೂ ಮತ್ತು ಇವರು ಓದಿದ ಶಾಲೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವು, ಅನುದಾನ ಘೋಷಿಸಿದ್ದಾರೆ.

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿ ಬಹುಮಾನ ನೀಡಿದರು.

ಇದನ್ನೂ ಓದಿ: ಎಸ್​ಎಸ್​ಎಲ್​ಸಿಯಲ್ಲಿ ಬಾಗಲಕೋಟೆಯ ರೈತನ ಮಗಳು ರಾಜ್ಯಕ್ಕೆ ಪ್ರಥಮ: ರ‍್ಯಾಂಕ್ ಹಿಂದಿನ ಗುಟ್ಟು ಬಿಚ್ಚಿಟ್ಟ ಅಂಕಿತಾ

ಟಾಪರ್ಸ್​ ಜೊತೆಗೆ ಶಾಲೆಗಳಗೂ ಬಹುಮಾನ

ಅಂಕಿತಾ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂಗಳ ನೆರವನ್ನು ಸಿಎಂ ನೀಡಿದರು. ಅಲ್ಲದೇ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಿಎಂ ಬರೆದುಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾನಲ್ಲಿ ಪೋಸ್ಟ್ ಮಾಡಿದ ಸಿಎಂ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಇಂದು ಸನ್ಮಾನಿಸಿ, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದೆ. ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿದ್ದೇನೆ.

ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ, ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ ಎಂದು ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.