ಕೆ-ಸೆಟ್ ಪರೀಕ್ಷೆ ರದ್ದುಗೊಳಿಸಲು ಸಿದ್ದರಾಮಯ್ಯ ಆಗ್ರಹ, ಪರೀಕ್ಷೆ ಮುಂದೂಡಲು ಮುಕ್ತ ವಿದ್ಯಾಲಯ ಪತ್ರ
ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಭಾಗ ಜಲಾವೃತವಾಗಿವೆ. ಜನರ ಸಂವಹನ ಮತ್ತು ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ನಾಳೆ ನಡೆಯಲಿರುವ ಕೆ-ಸೆಟ್ ಪರೀಕ್ಷೆ ರದ್ದುಗೊಳಿಸಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಪರಿಸ್ಥಿತಿಯನ್ನು ಗಮನಕ್ಕೆ ತೆಗೆದುಕೊಂಡು, ಕೆ-ಸೆಟ್ ಪರೀಕ್ಷೆ ರದ್ದುಗೊಳಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ. ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಭಾಗ ಜಲಾವೃತವಾಗಿವೆ. ಜನರ ಸಂವಹನ ಮತ್ತು ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ನಾಳೆ ನಡೆಯಲಿರುವ ಕೆ-ಸೆಟ್ ಪರೀಕ್ಷೆ ರದ್ದುಗೊಳಿಸಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೆ-ಸೆಟ್ ಅಭ್ಯರ್ಥಿಗಳು ಸಹ ಈ ಮೊದಲು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. ಕೆ-ಸೆಟ್ ಪರೀಕ್ಷೆಗೆ ತೆರಳಲಾಗದೆ ಪರೀಕ್ಷಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ತೀವ್ರ ಮಳೆಯಿಂದ ಹೆದ್ದಾರಿಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲಾಗದೆ ಪರೀಕ್ಷಾರ್ಥಿಗಳು ಪರದಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪರೀಕ್ಷಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಧಾರವಾಡ, ಶಿವಮೊಗ್ಗ ಪರೀಕ್ಷಾ ಕೇಂದ್ರಕ್ಕೆ ಹೋಗಲು ಆಗ್ತಿಲ್ಲ ಎಂದು ಕೆಸೆಟ್ ಪರೀಕ್ಷೆ ಎದುರಿಸಲು ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳ ಅಳಲು ತೋಡಿಕೊಂಡಿದ್ದಾರೆ.
Many parts in North Karnataka are submerged due to heavy rainfall. People have lost both connectivity & communication.
This being the situation, I urge @CMofKarnataka to postone the K-CET exams which was scheduled on 25 July, in the interest of candidates from North Karnataka.
— Siddaramaiah (@siddaramaiah) July 24, 2021
ಭಾರಿ ಮಳೆಯಿಂದ ಎಲ್ಲ ರಸ್ತೆಗಳು ಬಂದ್ ಆಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವುದಕ್ಕೆ ಆಗುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಜಲಾವೃತವಾಗಿವೆ. ಪರೀಕ್ಷಾರ್ಥಿಗಳ ಪಠ್ಯಪುಸ್ತಕ, ಪ್ರವೇಶ ಪ್ರತಿ ನೀರುಪಾಲಾಗಿದೆ. ಹೀಗಾಗಿ ಕೆ-ಸೆಟ್ ಪರೀಕ್ಷೆ ಮುಂದೂಡಲು ರಾಜ್ಯ ಸರ್ಕಾರಕ್ಕೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದಾರೆ.
ಜುಲೈ 26ರಿಂದ ನಡೆಯಬೇಕಿದ್ದ ಕರ್ನಾಟಕ ಮುಕ್ತ ಶಾಲೆಯ ಪರೀಕ್ಷೆ ಮುಂದೂಡುವಂತೆ ಜೆಎಸ್ಎಸ್ ಕರ್ನಾಟಕ ಮುಕ್ತ ವಿದ್ಯಾಲಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದೆ. ಪ್ರೌಢಶಾಲೆ ವ್ಯಾಸಂಗವನ್ನು ಅರ್ಧಕ್ಕೆ ಬಿಟ್ಟವರಿಗೆ ಮುಕ್ತ ವಿದ್ಯಾಲಯವು ಕಲಿಕೆಗೆ ವ್ಯವಸ್ಥೆ ಮಾಡಿ ಪರೀಕ್ಷೆ ನಡೆಸುತ್ತದೆ. ಈ ವರ್ಷ ಜುಲೈ 26ರಿಂದ ಆಗಸ್ಟ್ 4ರ ಅವಧಿಯಲ್ಲಿ 2500 ಮಂದಿ ಪರೀಕ್ಷೆ ಬರೆಯಬೇಕಿತ್ತು.
ರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲು ಶಿಕ್ಷಣ ಸಚಿವರಿಗೆ ಜೆಎಸ್ಎಸ್ ಕರ್ನಾಟಕ ಮುಕ್ತ ವಿದ್ಯಾಲಯ ಪತ್ರ ಬರೆದಿದೆ. ಮಳೆ ಹೆಚ್ಚಾಗಿರುವುದರಿಂದ ರಸ್ತೆಗಳು ಮುಳುಗಡೆಯಾಗಿದ್ದು, ಸಾರಿಗೆ ಸಂಪರ್ಕ ಅಸ್ತವ್ಯಸ್ಥಗೊಂಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗುವುದು ಕಷ್ಟ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕು ಎಂದು ಜೆಎಸ್ಎಸ್ ಕರ್ನಾಟಕ ಮುಕ್ತ ವಿದ್ಯಾಲಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.
ಎಸ್ಎಸ್ಎಲ್ಸಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಈಚೆಗಷ್ಟೇ ಪರೀಕ್ಷೆ ಮುಗಿದಿದೆ. ಕೇವಲ 2 ದಿನಗಳಲ್ಲಿ ಪರೀಕ್ಷೆ ಮುಕ್ತಾಯಗೊಂಡಿದೆ. ಡ್ರಾಪ್ಔಟ್ ವಿದ್ಯಾರ್ಥಿಗಳಿಗೂ ಅದೇ ಮಾದರಿಯಲ್ಲಿ ಪರೀಕ್ಷೆ ನಡೆಸಬೇಕು ಪರೀಕ್ಷಾರ್ಥಿಗಳು ಶಿಕ್ಷಣ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ.
(Siddaramiah Demands Postpone of K-Set Exams)
ಇದನ್ನೂ ಓದಿ: Karnataka Rains: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ; ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ, ಕಾಂಗ್ರೆಸ್ ನಾಯಕರ ಭೇಟಿ, ಪರಿಶೀಲನೆ
ಇದನ್ನೂ ಓದಿ: Karnataka Rains: ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ; ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ