AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗ

Karnataka 2nd PUC Board Exams: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಸುತ್ತೋಲೆ ಹೊರಡಿಸಿದೆ. ಹೊಸ ನಿಯಮದಲ್ಲೇನಿದೆ? ಯಾವಾಗಿನಿಂದ ಜಾರಿಯಾಗಲಿದೆ? ವಿದ್ಯಾರ್ಥಿಗಳಿ ಅನುಕೂಲ ಆಗಲಿದೆಯೇ? ಇತ್ಯಾದಿ ವಿವರ ಇಲ್ಲಿದೆ.

ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗ
ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗ
Vinay Kashappanavar
| Edited By: |

Updated on: Sep 13, 2024 | 10:41 AM

Share

ಬೆಂಗಳೂರು, ಸೆಪ್ಟೆಂಬರ್ 13: ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಹೊಸ ನಿಯಮ ಅನುಷ್ಠಾನಗೊಳಿಸಲು ಮಂಡಳಿ ಸಜ್ಜಾಗಿದ್ದು, ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ ಕಡಿಮೆಯಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿದೆ. ಇದರಿಂದಾಗಿ, 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ.

ಹೊಸ ನಿಯಮ ಯಾವಾಗಿನಿಂದ ಜಾರಿ?

ಇದೇ ಶೈಕ್ಷಣಿಕ ವರ್ಷದಿಂದ ಹೊಸ ನಿಯಮ ಜಾರಿಗೊಳಿಸಲಾಗುವುದು ಎಂದು ಮಂಡಳಿ ಮಾಹಿತಿ ನೀಡಿದೆ. ಆದರೆ, ಪರೀಕ್ಷೆಯ ಅವಧಿ ಕಡಿತವಾದರೂ ವಿದ್ಯಾರ್ಥಿಗಳು ಪರೀಕ್ಷಾ ಹಾಲ್​​ನಲ್ಲಿ ಮೂರು ಗಂಟೆ ಇರಲೇಬೇಕಾಗುತ್ತದೆ. ಪರೀಕ್ಷೆಯ ಆರಂಭದ 15 ನಿಮಿಷವನ್ನು ಪ್ರಶ್ನೆಗಳನ್ನು ಓದಿಕೊಳ್ಳಲು ಬಳಸಲು ಅವಕಾಶ ನೀಡಲಾಗುತ್ತದೆ. ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ 100 ಅಂಕಕ್ಕೆ ಬದಲು 80 ಅಂಕಕ್ಕೆ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್ ಅಸ್ತ್ರ ಪ್ರಯೋಗ; ಸರ್ಕಾರಿ ಶಾಲಾ ಶಿಕ್ಷಕರ ಪರದಾಟಕ್ಕೆ ಕಾರಣಾಯ್ತು ಇಲಾಖೆ ನಡೆ

ಈ ಹಿಂದೆಯೂ 3 ಗಂಟೆ ಅವಧಿಯ ಪರೀಕ್ಷೆ ಇದ್ದಾಗಲೂ ಪ್ರಶ್ನೆಗಳನ್ನು ಓದಿಕೊಳ್ಳಲು 15 ನಿಮಿಷವನ್ನು ಹೆಚ್ಚುವರಿಯಾಗಿ ಕೊಡಲಾಗುತ್ತಿತ್ತು ಎಂಬುದು ಗಮನಾರ್ಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ