ಖಾಸಗಿ ಶಾಲೆಗಳಿಗೆ ಠಕ್ಕರ್ ನೀಡಲು ಮುಂದಾದ ಶಿಕ್ಷಣ ಇಲಾಖೆ: ಇನ್ನುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿಯೂ ಸ್ಪೋಕನ್ ಇಂಗ್ಲಿಷ್ ಕ್ಲಾಸ್
ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದ್ದು, ಖಾಸಗಿ ಶಾಲೆಗಳಿಗೆ ಠಕ್ಕರ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಇನ್ಮುಂದೆ ಸ್ಪೋಕನ್ ಇಂಗ್ಲಿಷ್ (Spoken English) ಕ್ಲಾಸ್ ಶುರು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದ್ದು, ಖಾಸಗಿ ಶಾಲೆಗಳಿಗೆ ಠಕ್ಕರ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ರಾಷ್ಟ್ರ ಮಟ್ಟದಲ್ಲಿ ಮಕ್ಕಳ ಸಂಹವನ ಶಕ್ತಿ ಹೆಚ್ಚಿಸಲು ಇದೇ ವರ್ಷದಿಂದ ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಆರಂಭಿಸಲು ತಯಾರಿ ಮಾಡಲಾಗುತ್ತಿದೆ. ಈಗಾಗಲೇ ಆಂಧ್ರಪ್ರದೇಶ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗಿದ್ದು, ಸಾಕಷ್ಟು ಸದ್ದು ಮಾಡಿದೆ. ಈಗ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಬಂಪರ್ ಆಫರ್ ನೀಡಿದೆ. ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಂವಹನ ಹಾಗು ಶಿಕ್ಷಣ ಪಡೆಯುವ ಉದ್ದೇಶದಿಂದ ಪ್ರಸಕ್ತ ವರ್ಷದಿಂದಲೇ ಇಂಗ್ಲಿಷ್ ಸ್ಪೋಕನ್ ಕ್ಲಾಸ್ ಶುರು ಮಾಡಲು ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಗೆ ಈ ಬಗ್ಗೆ ವಿಶೇಷ ತರಬೇತಿ ಹಾಗು ಕೌಶಲ್ಯ ಹೆಚ್ಚಿಸಲು ಸಿದ್ಧತೆ ಮಾಡಲಾಗುತ್ತಿದೆ.
Published On - 10:22 am, Wed, 20 July 22