ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಕೂಡ ಮುಂದೂಡಿಕೆ

SSLC 2024 Exam 2: ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಜೊತೆಗೆ ವಿಶೇಷ ಪರಿಹಾರ ಬೋಧನೆ ತರಗತಿಯನ್ನು ಮಂದೂಡಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಕೂಡ ಮುಂದೂಡಿಕೆ
ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ
Follow us
Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on:May 17, 2024 | 9:25 PM

ಬೆಂಗಳೂರು, ಮೇ.17: ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ(SSLC) ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಕೂಡ ಮುಂದೂಡಲಾಗಿದ್ದು, ಅದನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ. ಇನ್ನು ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ  ಆರಂಭವಾಗಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ:SSLC Exam 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಇದೇ ಮೇ.9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ. ಅದರಲ್ಲೂ ಕನ್ನಡ ಮಾಧ್ಯಮದಲ್ಲಿ ಓದಿರೋ ಸಾವಿರಾರು ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಫೇಲ್ ಆಗಿದ್ದರು. ಈ ಹಿನ್ನಲೆ ಅನುತ್ತೀರ್ಣ ಆದವರ ಸಲುವಾಗಿ ವಿಶೇಷ ಪರಿಹಾರ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Fri, 17 May 24

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ