AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam: ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕ್ರಮ

ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಇಂದು ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್​​​​ಸಿಇಆರ್​​ಟಿ), ಸಂಸ್ಕೃತ (ಪ್ರಥಮ ಭಾಷೆ) ಪರೀಕ್ಷೆಗಳು ನಡೆಯಲಿವೆ.

SSLC Exam: ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕ್ರಮ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on:Mar 25, 2024 | 9:16 AM

ಬೆಂಗಳೂರು, ಮಾರ್ಚ್​.25: ಇಂದಿನಿಂದ ರಾಜ್ಯಾದ್ಯಂತ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳಲಿವೆ (SSLC Exam). ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. 2023-24 ಸಾಲಿನ SSLC ಪರೀಕ್ಷೆ ಇಂದಿನಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಹಾಗೂ 4,28,058 ಬಾಲಕಿಯರು ನೋಂದಣಿ ಮಾಡಿಕೊಂಡಿದ್ದಾರೆ.

18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುತ್ತಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂ. ವಸೂಲಿ; ಬಿಜೆಪಿ ಅವಧಿಯಲ್ಲೇ ಆರಂಭವಾಗಿದೆ-ಸಚಿವ ಮಧು ಬಂಗಾರಪ್ಪ

ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಸಿಯೂಟ

SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಒದಗಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Mon, 25 March 24

ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?