ಬೆಂಗಳೂರು, ಮಾರ್ಚ್.25: ಇಂದಿನಿಂದ ರಾಜ್ಯಾದ್ಯಂತ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳಲಿವೆ (SSLC Exam). ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. 2023-24 ಸಾಲಿನ SSLC ಪರೀಕ್ಷೆ ಇಂದಿನಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಹಾಗೂ 4,28,058 ಬಾಲಕಿಯರು ನೋಂದಣಿ ಮಾಡಿಕೊಂಡಿದ್ದಾರೆ.
18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ 2,750 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುತ್ತಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂ. ವಸೂಲಿ; ಬಿಜೆಪಿ ಅವಧಿಯಲ್ಲೇ ಆರಂಭವಾಗಿದೆ-ಸಚಿವ ಮಧು ಬಂಗಾರಪ್ಪ
ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಒದಗಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:15 am, Mon, 25 March 24