AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ, ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದಾರೆ. 100 ರೂಪಾಯಿಗೆ ನಕಲಿ ಪತ್ರಿಕೆ ನೀಡಿ, ವಿದ್ಯಾರ್ಥಿಗಳ ಹಣ ಹಾಗೂ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವದಂತಿಗಳಿಗೆ ಬಲಿಯಾಗದಂತೆ ಮಕ್ಕಳಿಗೆ ಎಚ್ಚರಿಕೆ ನೀಡಿದ್ದು, ಅಧಿಕೃತ ಮಾಹಿತಿಗಳನ್ನಷ್ಟೇ ನಂಬಲು ಮನವಿ ಮಾಡಿದ್ದಾರೆ. ವಂಚಕರ ವಿರುದ್ಧ ದೂರು ದಾಖಲಿಸಲಾಗಿದೆ.

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ
SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ
Vinay Kashappanavar
| Edited By: |

Updated on: Jan 09, 2026 | 10:54 AM

Share

ಬೆಂಗಳೂರು, ಜನವರಿ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುತ್ತೇವೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಹಾಗೂ ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆ

ಈಗಾಗಲೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೇ ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಿದ್ದು, ಮಾರ್ಚ್​ನಿಂದ ಮುಖ್ಯ ಪರೀಕ್ಷೆ ಆರಂಭವಾಗಲಿದೆ. ಇದರ ನಡುವೆ ಕೆಲ ಕಿಡಗೇಡಿಗಳು ಎಸ್‌ಎಸ್‌ಎಲ್‌ಸಿ, ಪೂರ್ವಭಾವಿ ಪ್ರಶ್ನೆ ಪತ್ರಿಕೆ ಲೀಕ್ ಮಾಡತ್ತೇವೆಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. 100 ರೂಪಾಯಿ ಫೋನ್‌ಪೇ ಅಥವಾ ಆನ್‌ಲೈನ್ ಪಾವತಿ ಮಾಡಿದರೆ ಪ್ರಶ್ನೆ ಪತ್ರಿಕೆ ಕಳುಹಿಸುತ್ತೇವೆ ಎಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ರೀತಿ ಲೀಕ್​ ಆಗುತ್ತಿರುವ ಪ್ರಶ್ಬೆ ಪತ್ರಿಕೆಗಳು ಸಂಪೂರ್ಣ ನಕಲಿಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯದೊಂದಿಗೆ ಹಣವನ್ನೂ ಕಳೆದುಕೊಳ್ಳುತ್ತಿದ್ದಾರೆ.

ಈ ರೀತಿಯ ವದಂತಿಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ಶಿಕ್ಷಣ ಇಲಾಖೆಯ ಮೇಲೂ ಕಿಡಗೇಡಿಗಳು ಚಾಲೆಂಜ್ ಹಾಕಿದಂತೆ ವರ್ತಿಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಮಾತು ಕೇಳಿ ವಿದ್ಯಾರ್ಥಿಗಳು ಆತುರಕ್ಕೆ ಒಳಗಾಗಿ ಮೋಸ ಹೋಗಬಾರದು ಎಂದು ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ; ಮೂರು ಹಂತದಲ್ಲಿ ಎಕ್ಸಾಮ್

ಕಿಡಗೇಡಿಗಳ ವಿರುದ್ಧ ದೂರು

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಖಾಸಗಿ ಶಿಕ್ಷಣ ಇಲಾಖೆ ಹಾಗೂ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಪ್ರೈಮರಿ ಅಂಡ್ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ ಸಂಘಟನೆಗಳು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ಕಿಡಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳು ಯಾವುದೇ ಸುಳ್ಳು ಪ್ರಚಾರಕ್ಕೆ ಬಲಿಯಾಗದೆ ಅಧಿಕೃತ ಮಾಹಿತಿ ಮೇಲೆ ಮಾತ್ರ ನಂಬಿಕೆ ಇಡಬೇಕು ಎಂದು ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.