SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ
ಸಚಿವ ಸುರೇಶ್​ ಕುಮಾರ್​
Follow us
TV9 Web
| Updated By: Digi Tech Desk

Updated on:Jul 22, 2021 | 8:48 PM

ಬೆಂಗಳೂರು: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು (SSLC Results 2021) ಘೋಷಿಸಲಾಗುವುದು. ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್​ಗಳು ಲಭ್ಯವಿದೆ. ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಸೀಟ್​ಗಳು ಇವೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದರು. ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

ಇವತ್ತು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಸಲಾಯಿತು. ಇಂದು ನಡೆದ ಪರೀಕ್ಷೆಗೆ ಶೇಕಡಾ 99.65ರಷ್ಟು ಹಾಜರಾತಿಯಿತ್ತು. ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 3350 ವಿದ್ಯಾರ್ಥಿಗಳ ಗೈರಾಗಿದ್ದಾರೆ. ದ್ವಿತೀಯ ಭಾಷೆಗೆ 8,27,988 ವಿದ್ಯಾರ್ಥಿಗಳು ನೋಂದಣಿ, ದ್ವಿತೀಯ ಭಾಷೆ ಪರೀಕ್ಷೆಗೆ 8,24,686 ಮಕ್ಕಳು ಹಾಜರಾಗಿದ್ದರು. ದ್ವಿತೀಯ ಭಾಷೆ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತೃತೀಯ ಭಾಷೆಗೆ 8,17,640 ವಿದ್ಯಾರ್ಥಿಗಳು ನೋಂದಣಿ, 8,14,538 ಮಕ್ಕಳು ಹಾಜರು, 3102 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೊವಿಡ್​ ಕೇರ್​ ಸೆಂಟರ್​​ನಲ್ಲಿ 67 ಮಕ್ಕಳು ಪರೀಕ್ಷೆ ಬರೆದಿದ್ದಾರೆ. ವಿಶೇಷ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

ಬೆಂಗಳೂರು ಕೇಂದ್ರ ವಿವಿ ಪರೀಕ್ಷೆ ದಿನಾಂಕ ಪ್ರಕಟ: ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ

(SSLC Exam Results 2021 by August 1 says Education Minister Suresh Kumar)

Published On - 6:02 pm, Thu, 22 July 21