AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams 2021: ಜುಲೈ ಮೂರನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬಹುತೇಕ ಖಚಿತ; ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

SSLC Exams: ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ.

SSLC Exams 2021: ಜುಲೈ ಮೂರನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬಹುತೇಕ ಖಚಿತ; ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ
ಪರೀಕ್ಷೆ (ಸಾಂಕೇತಿಕ ಚಿತ್ರ)
TV9 Web
| Edited By: |

Updated on: Jun 19, 2021 | 11:51 AM

Share

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಳವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಮುಹೂರ್ತ ನಿಗದಿಯಾಗುವ ಕಾಲ ಹತ್ತಿರ ಬಂದಿದೆ. ಒಂದುವೇಳೆ ಕೊರೊನಾ ಸೋಂಕು ಹೆಚ್ಚಳವಾದರೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವ ಬಗ್ಗೆ ಯೋಚಿಸಲಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂದು ಹೇಳಿದ್ದರಾದರೂ ಈಗ ಸೋಂಕು ಇಳಿಮುಖವಾಗುತ್ತಿರುವ ಕಾರಣ ಜುಲೈ ಅಂತ್ಯದಲ್ಲಿ ಪರೀಕ್ಷೆ ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಣ ಇಲಾಖೆ ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಿದ್ದು, ಜುಲೈ ಅಂತ್ಯಕ್ಕೆ ಪರೀಕ್ಷೆ ನಡೆಸಲು ಬೇಕಾದ ಸಿದ್ಧತೆಗಳೂ ಚುರುಕುಗೊಂಡಿವೆ ಎನ್ನಲಾಗಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೇರೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ನೀಡುತ್ತಿರುವ ಕಾರಣ ಗೊಂದಲ ಮೂಡದಿರಲೆಂದು ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್​ಸೈಟ್ sslc.karnataka.gov.in ನಲ್ಲಿ ಮಾದರಿ ಪ್ರಶ್ನೆಪತ್ರಿಕೆಗಳನ್ನು ಪ್ರಕಟಿಸಿದೆ. ಮೂರು ದಿನಗಳ ಹಿಂದೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆ ನೀಡಲಾಗಿದ್ದು, ಈಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಪ್ರಕಟಿಸಲಾಗಿದೆ.

ಈ ಬಾರಿ ಬಹು ಆಯ್ಕೆ ಪ್ರಶ್ನೆಗಳನ್ನು ನೀಡುವ ಕುರಿತು ಈಗಾಗಲೇ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಪ್ರಶ್ನೆಗಳನ್ನು ರೂಪಿಸಲಾಗುವುದು. ಯಾವ ವಿದ್ಯಾರ್ಥಿಯನ್ನೂ ನಪಾಸು ಮಾಡುವ ಉದ್ದೇಶ ನಮಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಇದೀಗ ಎಲ್ಲಾ ವಿಷಯಗಳ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟವಾಗಿದ್ದು, ಪರೀಕ್ಷಾ ಸ್ವರೂಪದ ಬಗ್ಗೆ ಗೊಂದಲವಿರುವ ವಿದ್ಯಾರ್ಥಿಗಳು ಇದನ್ನು ನೋಡಿಕೊಂಡು ಅಭ್ಯಾಸ ಮಾಡಬಹುದಾಗಿದೆ.

ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಪ್ರತಿ ವಿಷಯಕ್ಕೆ ತಲಾ 40 ಅಂಕಗಳಂತೆ ಒಟ್ಟು 120 ಅಂಕದ 2 ಪ್ರಶ್ನೆಪತ್ರಿಕೆಗಳನ್ನು ಈ ಬಾರಿ ನೀಡಲಾಗುತ್ತಿದ್ದು, 3 ಗಂಟೆಗಳ ಕಾಲ ಪರೀಕ್ಷೆ ಜರುಗಲಿದೆ. ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆಗೆ ಸಂಬಂಧಿಸಿದವುಗಳೇ ಆಗಿರಲಿದ್ದು, ಉತ್ತರಗಳನ್ನು OMR ಶೀಟ್​ನಲ್ಲಿ ನಮೂದಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಒಎಮ್​ಆರ್​ ಶೀಟ್ ಮಾದರಿಯನ್ನೂ ಇಲಾಖೆ ಪ್ರಕಟ ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಜುಲೈ 3ನೇ ವಾರ ಪರೀಕ್ಷೆ ಖಚಿತವಾಗಿ ನಡೆಯಲಿದ್ದು, 20 ದಿನಗಳ ಮುಂಚೆ ದಿನಾಂಕ ಘೋಷಿಸುವುದಾಗಿ ಈ ಹಿಂದೆಯೇ ಸಚಿವ ಸುರೇಶ್ ಕುಮಾರ್ ಹೇಳಿರುವುದರಿಂದ ಇನ್ನು ಕೆಲವೇ ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ. ಸದ್ಯ ಪ್ರಶ್ನೆ ಪತ್ರಿಕೆಗಳನ್ನು ವೆಬ್​ಸೈಟ್​ನಿಂದ ಡೌನ್​ಲೋಡ್ ಮಾಡಿ ಅಭ್ಯಾಸ ಮಾಡಲು ಸೂಚನೆ ನೀಡಲಾಗಿದ್ದು, ಶಾಲಾ ಶಿಕ್ಷಕರಿಗೂ ಈ ಕುರಿತು ಕಾರ್ಯ ಪ್ರವೃತ್ತರಾಗುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: SSLC Exam Guidelines: ಎಸ್​ಎಸ್​ಎಲ್​ಸಿ ಪರೀಕ್ಷೆ ಮಾರ್ಗಸೂಚಿ ಪ್ರಕಟ: ಒಂದು ಬೆಂಚ್​ಗೆ ಒಬ್ಬನೇ ವಿದ್ಯಾರ್ಥಿ, ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗಬೇಕಿಲ್ಲ 

ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು