Karnataka SSLC Result 2024: ಮೇ 9ರಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಆನ್​ಲೈನ್​ನಲ್ಲಿ ನೋಡೋದು ಹೇಗೆ?

| Updated By: Digi Tech Desk

Updated on: May 08, 2024 | 3:35 PM

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2024 ಫಲಿತಾಂಶ: ಲೋಕಸಭೆ ಚುನಾವಣೆಯ ಕಾರಣ ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ತುಸು ತಡವಾಗಿದ್ದು, ಈ ವಾರವೇ ಪ್ರಕಟವಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮಂಗಳವಾರ ನಡೆಯಲಿದೆ. ಅದಾದ ನಂತರದ ದಿನಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಫಲಿತಾಂಶವನ್ನು ಆನ್​​ಲೈನ್​ನಲ್ಲೇ ನೋಡಲು ಏನು ಮಾಡಬೇಕು ಎಂಬ ವಿವರ ಇಲ್ಲಿದೆ.

Karnataka SSLC Result 2024: ಮೇ 9ರಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಆನ್​ಲೈನ್​ನಲ್ಲಿ ನೋಡೋದು ಹೇಗೆ?
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಮೇ 6: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಮೇ 9ರಂದು ಪ್ರಕಟವಾಗಲಿದೆ. ಮಂಗಳವಾರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ 2ನೇ ಹಂತದ ಮತದಾನವಿದ್ದ ಕಾರಣ ಫಲಿತಾಂಶ ವಿಳಂಬವಾಗಿದೆ ಆದಾಗ್ಯೂ, ಇದೇ ವಾರ ಪ್ರಕಟವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್​​​ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ.

ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶದ ಹೆಸರಿನಲ್ಲಿ ನಕಲಿ ಸಂದೇಶ ಭಾನುವಾರ ಹರಿದಾಡಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಫಾರ್ವರ್ಡ್​ ಆದ ಇಂತಹ ಅಸಂಬದ್ಧ ಸಂದೇಶಗಳಲ್ಲಿ ಬಗ್ಗೆ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು. ಇಲಾಖೆಯ ಅಧಿಕೃತ ವೆಬ್​​ಸೈಟ್​​ನಲ್ಲಿ ನೀಡಿದರೆ ಮಾತ್ರವೇ ಪರಿಗಣಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

ಎಸ್​ಎಸ್​ಎಲ್​​ಸಿ ರಿಸಲ್ಟ್ ಯಾವ್ ವೆಬ್​​ಸೈಟ್​ನಲ್ಲಿ ದೊರೆಯುತ್ತದೆ?

ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

  • ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟವು ತೆರೆಯುತ್ತದೆ
  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

ಕಳೆದ ವರ್ಷ, ಕರ್ನಾಟಕ ಬೋರ್ಡ್ ಎಸ್​ಎಸ್​ಎಲ್​ಸಿ ಫಲಿಶಾಂಶವನ್ನು ಮೇ 08 ರಂದು ಘೋಷಿಸಿತ್ತು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ 83.89 ರಷ್ಟು ದಾಖಲಾಗಿತ್ತು.

ಇದನ್ನೂ ಓದಿ: ಯಾದಗಿರಿ: ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 6 May 24