Karnataka SSLC Results: 157 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 09, 2021 | 4:27 PM

1,28,931 ವಿದ್ಯಾರ್ಥಿಗಳು A+ ಗ್ರೇಡ್​, 2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್​, 1,13,610 ವಿದ್ಯಾರ್ಥಿಗಳು C ಗ್ರೇಡ್​ ಪಡೆದುಕೊಂಡಿದ್ದಾರೆ.

Karnataka SSLC Results: 157 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಎಸ್​ಎಸ್​ಎಲ್​ಸಿ ಫಲಿತಾಂಶದ ವಿವರಗಳನ್ನು ಮಾಧ್ಯಮಗಳಿಗೆ ಒದಗಿಸಿದರು. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ 99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು. 4,70,160 ವಿದ್ಯಾರ್ಥಿಗಳು, 4,01,280 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಓರ್ವ ವಿದ್ಯಾರ್ಥಿನಿ ಗೈರಾಗಿದ್ದರಿಂದ ಅನುತ್ತೀರ್ಣರಾಗಿದ್ದಾರೆ.

1,28,931 ವಿದ್ಯಾರ್ಥಿಗಳು A+ ಗ್ರೇಡ್​, 2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್​, 1,13,610 ವಿದ್ಯಾರ್ಥಿಗಳು C ಗ್ರೇಡ್​ ಪಡೆದುಕೊಂಡಿದ್ದಾರೆ. ಸಿ ಗ್ರೇಡ್ ಪಡೆದಿರುವ ಶೇ 9ರಷ್ಟು ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್​ ಮಾರ್ಕ್ಸ್​) ನೀಡಿ ಉತ್ತೀರ್ಣ ಮಾಡಲಾಗಿದೆ.

ಒಟ್ಟು 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 289 ವಿದ್ಯಾರ್ಥಿಗಳು 623 ಅಂಕ, ಇಬ್ಬರು 622 ಅಂಕ, 449 ವಿದ್ಯಾರ್ಥಿಗಳು 621, 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ. ಪ್ರಥಮ ಭಾಷೆಯಲ್ಲಿ 25,702 ವಿದ್ಯಾರ್ಥಿಗಳಿಗೆ 125ಕ್ಕೆ 125 ಅಂಕ, ದ್ವಿತೀಯ ಭಾಷೆಯಲ್ಲಿ 36,628 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ, ತೃತೀಯ ಭಾಷೆಯಲ್ಲಿ 36,776 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ, ಗಣಿತ ವಿಷಯದಲ್ಲಿ 6321 ಮಕ್ಕಳಿಗೆ 100ಕ್ಕೆ 100, ವಿಜ್ಞಾನ ವಿಷಯದಲ್ಲಿ 3,649 ಮಕ್ಕಳು 100ಕ್ಕೆ 100, ಸಮಾಜ ವಿಜ್ಞಾನ ವಿಷಯದಲ್ಲಿ 9,367 ಮಕ್ಕಳು 100ಕ್ಕೆ 100 ಅಂಕ ಪಡೆದಿದ್ದಾರೆ.

(sslc results 157 students got out of out numbers)

ಇದನ್ನೂ ಓದಿ: Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ

ಇದನ್ನೂ ಓದಿ: Karnataka SSLC Result 2021 Live: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; 99.9 ಶೇಕಡಾ ಫಲಿತಾಂಶ

Published On - 4:19 pm, Mon, 9 August 21