SSLC Results 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ನೂತನ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅಧಿಕೃತ ಘೋಷಣೆ

BC Nagesh:ಆಗಸ್ಟ್ 9, ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

SSLC Results 2021:  ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ನೂತನ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅಧಿಕೃತ ಘೋಷಣೆ
ಬಿ.ಸಿ.ನಾಗೇಶ್
Follow us
TV9 Web
| Updated By: guruganesh bhat

Updated on:Aug 09, 2021 | 3:51 PM

ಬೆಂಗಳೂರು: ಈಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು  2 ದಿನ ಮಾತ್ರ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು.  ಈಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಇದೀಗ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in kseeb.kar.nic.in karresults.nic.in

ಇದನ್ನೂ ಓದಿ: 

SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಕೊಂಚ ವಿಳಂಬ; ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? 

ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

(SSLC results 2021 announced on Monday August 9 says New Education Minister BC Nagesh)

Published On - 6:55 pm, Sat, 7 August 21