AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು?

ಕರ್ನಾಟಕ SSLC ಫಲಿತಾಂಶ ಇಂದು (ಏಪ್ರಿಲ್ 15) ಪ್ರಕಟವಾಗಲಿದೆ ಎಂಬ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳನ್ನು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಸ್ಪಷ್ಟಪಡಿಸಿದೆ. ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಫಲಿತಾಂಶ ಮುಂದಿನ ವಾರ, ಬಹುಶಃ ಏಪ್ರಿಲ್ 23ರ ನಂತರ ನಿರೀಕ್ಷಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ಮಾಹಿತಿಗಳಿಗೆ ಮಾತ್ರ ಗಮನ ನೀಡಿ, ಸುಳ್ಳು ಸುದ್ದಿಗಳಿಗೆ ಆತಂಕ ಪಡಬೇಡಿ ಎಂದು ಮಂಡಳಿ ಮನವಿ ಮಾಡಿದೆ.

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 15, 2026 | 7:10 AM

Share

ಬೆಂಗಳೂರು, ಏ.15: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮಂಡಳಿ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಇಂದು ಫಲಿತಾಂಶ ಪ್ರಕಟ ಮಾಡಲ್ಲ ಎಂದು ಮಂಡಳಿ ಹೇಳಿದೆ. ಇನ್ನು ಫಲಿತಾಂಶ ತಯಾರಿಗಳು ನಡೆಯುತ್ತಿದೆ ಎಂದು ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಬಿಡುತ್ತಿರುವ ಸುಳ್ಳು ಸುದ್ದಿಗಳಿಗೆ ಮಂಡಳಿ ಅಧಿಕೃತವಾಗಿ ತೆರೆ ಎಳೆದಿದೆ. ಇಂದು ಯಾವುದೇ ಫಲಿತಾಂಶ ಪ್ರಕಟವಾಗುತ್ತಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಷ್ಟೇ ಆರಂಭವಾಗಿದ್ದು, ಪೂರ್ಣಗೊಳ್ಳಲು ಕಾಲಾವಕಾಶ ಬೇಕಿದೆ.

ಇದನ್ನೂ ಓದಿ: ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?

ಮಂಡಳಿಯ ಮಾಹಿತಿಯ ಪ್ರಕಾರ, ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಬಹುಶಃ ಏಪ್ರಿಲ್ 23ರ ನಂತರ ಅಧಿಕೃತವಾಗಿ ಫಲಿತಾಂಶ ಹೊರಬೀಳಬಹುದು ಎಂದು ಅಂದಾಜಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಕೇವಲ ಅಧಿಕೃತ ವೆಬ್‌ಸೈಟ್‌ಗಳು ಅಥವಾ ಮಂಡಳಿಯ ಪ್ರಕಟಣೆಗಳನ್ನು ಮಾತ್ರ ನಂಬಬೇಕು. ಕಿಡಿಗೇಡಿಗಳ ಹಾದಿತಪ್ಪಿಸುವ ಸುದ್ದಿಗಳ ಬಗ್ಗೆ ಎಚ್ಚರವಿರಲಿ ಎಂದು ಮಂಡಳಿ ತಿಳಿಸಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವೆಬ್‌ಸೈಟ್‌ಗೆ ಭೇಟಿ ನೀಡಿ: ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ results.cbse.nic.in ಅಥವಾ cbse.gov.in ಗೆ ಲಾಗ್ ಇನ್ ಆಗಿ.

ಲಿಂಕ್ ಕ್ಲಿಕ್ ಮಾಡಿ: ಮುಖಪುಟದಲ್ಲಿ ಕಾಣುವ ‘Secondary School Examination (Class X) Results 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿವರಗಳನ್ನು ಭರ್ತಿ ಮಾಡಿ: ನಿಮ್ಮ ರೋಲ್ ನಂಬರ್ (Roll Number), ಸ್ಕೂಲ್ ನಂಬರ್ (School Number) ಮತ್ತು ಅಡ್ಮಿಟ್ ಕಾರ್ಡ್ ಐಡಿ (Admit Card ID) ಅನ್ನು ನಿಖರವಾಗಿ ನಮೂದಿಸಿ.

ಸಬ್ಮಿಟ್ ನೀಡಿ: ವಿವರಗಳನ್ನು ಸಲ್ಲಿಸಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ.

ಡೌನ್‌ಲೋಡ್: ಭವಿಷ್ಯದ ಬಳಕೆಗಾಗಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 am, Wed, 15 April 26

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ