ಇಂದಿನಿಂದ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ಆರಂಭ! ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

| Updated By: sandhya thejappa

Updated on: Jun 27, 2022 | 8:56 AM

ಪರೀಕ್ಷೆಗೂ ಮುನ್ನ ಪ್ರತಿ ಕೊಠಡಿಗಳಿಗೂ ಸ್ಯಾನಿಟೈಸರ್ ಸಿಂಪಡಿಸಿ, ದೈಹಿಕ ಅಂತರ ಕಾಪಾಡಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಇಂದಿನಿಂದ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ಆರಂಭ! ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಇಂದಿನಿಂದ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ (SSLC Supplementary Exam) ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಪೂರಕ ಪರೀಕ್ಷೆಗೆ ಒಟ್ಟು 94,649 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗಿದೆ. ಇನ್ನು ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನ ವಹಿಸಿದೆ. ಪರೀಕ್ಷೆಗೂ ಮುನ್ನ ಪ್ರತಿ ಕೊಠಡಿಗಳಿಗೂ ಸ್ಯಾನಿಟೈಸರ್ ಸಿಂಪಡಿಸಿ, ದೈಹಿಕ ಅಂತರ ಕಾಪಾಡಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್​ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡಬೇಕು. ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪುಗೂಡದಂತೆ ತಡೆಯಬೇಕು. ಕೆಮ್ಮು, ನೆಗಡಿ, ಜ್ವರ ಇರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡಬೇಕು. ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು

ಇದನ್ನೂ ಓದಿ
Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು
Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು
ಆಕ್ಸಿಡೆಂಟ್ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಟ್ವಿಸ್ಟ್; ಮದ್ಯ ಕುಡಿಸಿ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಗಳು ಅರೆಸ್ಟ್!
Gym Ravi: 50 ದಿನ ಪೂರೈಸಿದ ‘ಪುರುಷೋತ್ತಮ’ ಸಿನಿಮಾ; ಹೀರೋ ಆಗಿ ಗೆಲುವು ಕಂಡ ಜಿಮ್​ ರವಿ

ಪೂರಕ ಪರೀಕ್ಷೆಯ ವೇಳಾಪಟ್ಟಿ:

ಜೂನ್ 27- ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ.

ಜೂನ್ 28- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)

ಜೂನ್ 29- ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಜೂನ್ 30- ಸಮಾಜ ವಿಜ್ಞಾನ

ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್​ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ 2- ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ 4- ಗಣಿತ, ಸಮಾಜಶಾಸ್ತ್ರ

ಇದನ್ನೂ ಓದಿ: Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು

Published On - 8:50 am, Mon, 27 June 22