SSLC Supplementary Exam: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ BMTC
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 12 ರಿಂದ ಆರಂಭಗೊಳ್ಳಿದ್ದು, ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಬಿಎಂಟಿಸಿ ಉಚಿತ ಪ್ರಯಾಣ ಘೋಷಿಸಿದೆ.
ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು (SSLC Supplementary Exam 2023) ಜೂನ್ 12 ರಿಂದ ಆರಂಭಗೊಳ್ಳಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ (KSRTC) ಉಚಿತವಾಗಿ ಪ್ರಯಾಣಿಸಿದ ಬೆನ್ನೇಲೆ ಬಿಎಂಟಿಸಿ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದೆ. ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ BMTC ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅವಕಾಶವನ್ನು ಕಲ್ಪಿಸಿದೆ. ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ ಜೂನ್ 19ರವರೆಗೆ ನಡೆಯುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ.
ಇದನ್ನೂ ಓದಿ: SSLC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಇದನ್ನು ಮರೆಯದೆ ಕೊಂಡೊಯ್ಯಿರಿ
ಮರೆಯದೆ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿ
ಪರೀಕ್ಷೆ ಬರೆಯಬೇಕಾದರೆ ಹಾಲ್ ಟಿಕೆಟ್ ಅವಶ್ಯವಾಗಿದೆ. ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಹೀಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮರೆಯದೆ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿ.
ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆ
ಮೇ 22 ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದ್ದು, ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.
ಇದನ್ನೂ ಓದಿ: ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ: ಕೆಎಸ್ಸಿಪಿಸಿಆರ್ ಪ್ರಸ್ತಾವನೆ
ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಳಿ ಇರುವುದು ಕೇವಲ 5 ದಿನಗಳಷ್ಟೆ, 6ನೇ ದಿನದಿಂದ ಪರೀಕ್ಷೆ ಬರೆಯಬೇಕಿದೆ. ಹೀಗಾಗಿ ಪರೀಕ್ಷೆಗೆ ಇನ್ನೂ ಹೆಚ್ಚಿನ ತಯಾರಿ ನಡೆಸಿ. ಆ ಮೂಲಕ ಪರೀಕ್ಷೆಯ ಕುರಿತ ಭಯ, ಆತಂಕ, ಗೊಂದಲ ಇತ್ಯಾದಿಗಳನ್ನು ದೂರಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಲ್ಲಿ ಯಶಸ್ವಿಯಾಗಿರಿ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:12 pm, Wed, 7 June 23