SSLC Exams: ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ
SSLC Supplementary Exam: ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್‌ಸಿ ಬೋರ್ಡ್‌ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಆಗಿದೆ.
ಬೆಂಗಳೂರು: ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್‌ಸಿ ಬೋರ್ಡ್‌ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಆಗಿದೆ. ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯ ದಿನಾಂಕ ಇನ್ನಷ್ಟೇ ತಿಳಿದು ಬರಬೇಕಿದೆ. ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು ಎಂದು ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆದ ಮಾದರಿಯಲ್ಲಿಯೇ ಪೂರಕ ಪರೀಕ್ಷೆ ಕೂಡ ನಡೆಯಲ್ಲಿದೆ.
ಸಪ್ಟೆಂಬರ್ ತಿಂಗಳಲ್ಲಿ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಪೂರಕ ಪರೀಕ್ಷೆ ನಡೆಯಲಿದೆ. ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಕೊವಿಡ್ ಕಾರಣಕ್ಕೆ ಗೈರಾದ ವಿದ್ಯಾರ್ಥಿಗಳಿಗೆ ನಡೆಯುವ ಪೂರಕ ಪರೀಕ್ಷೆ ಇದಾಗಿದೆ. ಪರೀಕ್ಷೆ ಸಪ್ಟೆಂಬರ್ ತಿಂಗಳಲ್ಲೇ ಇರಲಿದೆ ಎಂದು ತಿಳಿಸಲಾಗಿತ್ತು.
ಎಸ್ಎಸ್ಎಲ್‌ಸಿ ಬೋರ್ಡ್‌ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಸಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ಸಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆ
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಮುಖಚಂಡಿಯ ಎಸ್ಎಸ್ಎಲ್‌ಸಿ ಸಾಧಕಿಗೆ ಹೃದಯ ಕಾಯಿಲೆ: ಸಚಿವ ಗೋವಿಂದ ಕಾರಜೋಳ ಸ್ಪಂದನೆ
SSLC Exams: ಸೆಪ್ಟೆಂಬರ್ ತಿಂಗಳಲ್ಲಿ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ
Published On - 6:31 pm, Wed, 18 August 21