SSLC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ, ಇದನ್ನು ಮರೆಯದೆ ಕೊಂಡೊಯ್ಯಿರಿ

SSLC Supplementary Exam: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್ 12 ರಿಂದ ಆರಂಭಗೊಳ್ಳಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಲ್ ಟಿಕೆಟ್ ತೋರಿಸಿ ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡಲಾಗಿದೆ.

SSLC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ, ಇದನ್ನು ಮರೆಯದೆ ಕೊಂಡೊಯ್ಯಿರಿ
ಪೂರಕ ಪರೀಕ್ಷೆ ಬರೆಯಲು ಹೋಗುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಕೆಎಸ್​ಆರ್​ಟಿಸಿImage Credit source: FILE PHOTO
Follow us
Rakesh Nayak Manchi
|

Updated on:Jun 06, 2023 | 8:24 PM

ಬೆಂಗಳೂರು: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು (SSLC Supplementary Exam 2023) ಜೂನ್ 12 ರಿಂದ ಆರಂಭಗೊಳ್ಳಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಹಾಲ್ ಟಿಕೆಟ್ ತೋರಿಸಿ ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ (Free Travel) ಅವಕಾಶ ಕಲ್ಪಿಸಿದೆ. ಪರೀಕ್ಷೆ ಬರೆಯಬೇಕಾದರೆ ಹಾಲ್ ಟಿಕೆಟ್ ಅವಶ್ಯವಾಗಿದೆ. ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್​ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಹೀಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮರೆಯದೆ ಹಾಲ್ ಟಿಕೆಟ್ ಕೊಂಡೊಯ್ಯಿರಿ.

ಉಚಿತ ಪ್ರಯಾಣದ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ನಿಗಮ, ಜೂನ್ 12 ರಿಂದ 19 ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕರಾರಸಾ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸುತ್ತಿದೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದೆ.

ಇದನ್ನೂ ಓದಿ: SSLC Revaluation Results 2023: ಎಸ್​ಎಸ್​ಎಲ್​ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ; ಪರಿಶೀಲಿಸಲು ಇಲ್ಲಿದೆ ಲಿಂಕ್

ಮೇ 22 ರಂದು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದ್ದು, ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.

ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಳಿ ಇರುವುದು ಕೇವಲ 5 ದಿನಗಳಷ್ಟೆ, 6ನೇ ದಿನದಿಂದ ಪರೀಕ್ಷೆ ಬರೆಯಬೇಕಿದೆ. ಹೀಗಾಗಿ ಪರೀಕ್ಷೆಗೆ ಇನ್ನೂ ಹೆಚ್ಚಿನ ತಯಾರಿ ನಡೆಸಿ. ಆ ಮೂಲಕ ಪರೀಕ್ಷೆಯ ಕುರಿತ ಭಯ, ಆತಂಕ, ಗೊಂದಲ ಇತ್ಯಾದಿಗಳನ್ನು ದೂರಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಲ್ಲಿ ಯಶಸ್ವಿಯಾಗಿರಿ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Tue, 6 June 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು