ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ(SSLC Supplementary Exam Result 2022) ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಪೂರ್ಣ ಫಲಿತಾಂಶ ನಾಳೆ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಮಾಹಿತಿ ನೀಡಿದ್ದಾರೆ.
2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಇದರಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ. ನಾಳೆ ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. (https://karresults.nic.in/) ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ನಾಳೆ ಮಧ್ಯಾಹ್ನ 12 ಗಂಟೆ ನಂತರ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಪೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ.
— B.C Nagesh (@BCNagesh_bjp) July 20, 2022
Published On - 7:16 pm, Wed, 20 July 22