ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ ಸುದ್ದಿಗೋಷ್ಠಿ ಮೂಲಕ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 27, 29ರಂದು ನಡೆದಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಅಕ್ಟೋಬರ್ 11) ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.
352 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮಾಡಲಾಗಿತ್ತು. ಹೊಸ ಹಾಗೂ ಖಾಸಗಿ ಒಟ್ಟು 53,125 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಪರೀಕ್ಷೆ ಮಾಡಿ ಕೇವಲ 11 ದಿನದಲ್ಲಿ ಫಲಿತಾಂಶ ನೀಡಲು ಎಸ್ಎಸ್ಎಲ್ಸಿ ಬೋರ್ಡ್ ಮುಂದಾಗಿದೆ.
ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
ಇದನ್ನೂ ಓದಿ: SSLC Exams: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ
Karnataka SSLC Result 2021: ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ. ರಿಸಲ್ಟ್ ನೋಡಲು ಇಲ್ಲಿದೆ ಮಾಹಿತಿ