AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Date 2023: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ.

SSLC Supplementary Exam Date 2023: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟImage Credit source: Shutterstock
Rakesh Nayak Manchi
|

Updated on:May 22, 2023 | 7:37 PM

Share

ಬೆಂಗಳೂರು: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ (SSLC Supplementary Exam 2023) ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದ್ದು, ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ  ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.

ಪರೀಕ್ಷೆಯಲ್ಲಿ ಮಕ್ಕಳು ಅನುತ್ತೀರ್ಣರಾಗಲು ಹಲವಾರು ಕಾರಣಗಳಿರುತ್ತವೆ. ಪೋಷಕರು, ಮನೆಯ ವಾತಾವರಣ, ಶಿಕ್ಷಕರು, ಶಾಲಾ ವಾತಾವರಣ, ಸ್ನೇಹಿತರ ಬಳಗ, ಮಕ್ಕಳ ಗ್ರಹಣಶಕ್ತಿ, ಮಕ್ಕಳಲ್ಲಿನ ಆತ್ಮವಿಶ್ವಾಸ, ಶೈಕ್ಷಣಿಕ ವಿಷಯದಲ್ಲಿ ಆಸಕ್ತಿಯ ಕೊರತೆ, ಪರೀಕ್ಷೆಯ ಕುರಿತ ಭಯ, ಆತಂಕ ಈ ಎಲ್ಲಾ ಅಂಶಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆಯಲು ಅಥವಾ ಫೇಲ್‌ ಆಗಲು ಕಾರಣವಾಗಬಹುದು. ಈಗ ಅನುತ್ತೀರ್ಣರಾದವರು ಇವೆಲ್ಲಾ ಚಿಂತನೆಗಳನ್ನು ಬಿಟ್ಟು ಫ್ರೆಶ್ ಆಗಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಸಜ್ಜಾಗಿ, ಹೆಚ್ಚಿನ ಅಂಕಗಳಿಸುವಲ್ಲಿ ಯಶಸ್ವಿಯಾಗಿರಿ.

ಇದನ್ನೂ ಓದಿ: JEE Advanced 2023: ಈ ಕೊನೆಯ ನಿಮಿಷದ ಸಲಹೆಗಳು ನಿಮಗೆ ಉತ್ತಮವಾಗಿ ತಯಾರಾಗಲು ಸಹಾಯ ಮಾಡುತ್ತದೆ

ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.  ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Mon, 22 May 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?