SSLC Exams: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ

ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ.

SSLC Exams: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
TV9kannada Web Team

| Edited By: ganapathi bhat

Aug 18, 2021 | 5:19 PM

ಬೆಂಗಳೂರು: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಪೂರಕ ಪರೀಕ್ಷೆ ನಡೆಯಲಿದೆ. ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಕೊವಿಡ್ ಕಾರಣಕ್ಕೆ ಗೈರಾದ ವಿದ್ಯಾರ್ಥಿಗಳಿಗೆ ನಡೆಯುವ ಪೂರಕ ಪರೀಕ್ಷೆ ಇದಾಗಿದೆ. ಪರೀಕ್ಷೆ ಸಪ್ಟೆಂಬರ್ ತಿಂಗಳಲ್ಲೇ ಇರಲಿದೆ ಎಂದು ತಿಳಿಸಲಾಗಿದೆ.

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಇನ್ನಷ್ಟೇ ತಿಳಿದು ಬರಬೇಕಿದೆ. ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು ಎಂದು ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆದ ಮಾದರಿಯಲ್ಲಿಯೇ ಪೂರಕ ಪರೀಕ್ಷೆ ಕೂಡ ನಡೆಯಲ್ಲಿದೆ.

ಅದರಂತೆ, ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: NDA Exam: ಲಿಂಗ ತಾರತಮ್ಯಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಈ ಬಾರಿ ಮಹಿಳೆಯರಿಗೂ ಎನ್​ಡಿಎ ಪರೀಕ್ಷೆ ಬರೆಯಲು ಅವಕಾಶ

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿಂದಿನ ದಿನವೇ ಕೊವಿಡ್ ಖಚಿತ; ಅಂಜದೇ ಅಳುಕದೇ ಪರೀಕ್ಷೆ ಬರೆದ ವಿದ್ಯಾರ್ಥಿ ಇಂದು ಸಾಧಕ

(SSLC Supplementary Exams will be held in September in Karnataka)

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada