SSLC Exam Time Table: ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ

Karnataka SSLC Exam 2022 Time Table: ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

SSLC Exam Time Table: ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jan 07, 2022 | 10:57 AM

ಬೆಂಗಳೂರು: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ (ಜ.6) ಸಂಜೆ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿಯ ವಿವರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Bababudangiri: ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವರ ಸೂಚನೆ ಇದನ್ನು ಓದಿ: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

Published On - 8:02 pm, Thu, 6 January 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ