AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜರ್ಮನ್ ಭಾಷಾ ಪರೀಕ್ಷಾ ಕೇಂದ್ರ ಸ್ಥಾಪಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ವಿದೇಶದಲ್ಲಿ ಕೆಲಸ ಮಾಡುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಅದಕ್ಕೆ ಭಾಷೆ ಎಂಬುದು ಬಹಳ ಮುಖ್ಯವಾಗಿರುತ್ತದೆ. ಅಲ್ಲಿನ ಭಾಷೆಯ ಬಗ್ಗೆ ಹಿಡಿತವಿದ್ದರೆ ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು. ಅದಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರಿನ ಗೋಥೆ ಇನ್‌ಸ್ಟಿಟ್ಯೂಟ್‌ನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿರ್ಧಾರಿಸಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರಿನಲ್ಲಿ ಜರ್ಮನ್ ಭಾಷಾ ಪರೀಕ್ಷಾ ಕೇಂದ್ರ ಸ್ಥಾಪಿಸಲು ನಿರ್ಧರಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 08, 2025 | 10:39 AM

Share

ಬೆಂಗಳೂರು, ಅ.8: ಕೌಶಲ್ಯ ಅಭಿವೃದ್ಧಿ ಇಲಾಖೆ ಕರ್ನಾಟಕದ ಯುವಕರು ವಿದೇಶಗಳಲ್ಲಿ ಉದ್ಯೋಗ ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರವನ್ನು (German language testing centre) ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಜರ್ಮನ್ ಭಾಷೆಯಲ್ಲಿ ಕೋರ್ಸ್‌ಗಳನ್ನು ನೀಡುವುದು ಹಾಗೂ ಪರೀಕ್ಷೆಗಳನ್ನು ನಡೆಸುವ ಏಕೈಕ ಕೇಂದ್ರವಾಗಿದೆ. ಬೆಂಗಳೂರಿನ ಗೋಥೆ ಇನ್‌ಸ್ಟಿಟ್ಯೂಟ್‌ನಲ್ಲಿ ಜರ್ಮನ್ ಭಾಷೆಯಲ್ಲಿ ಪರೀಕ್ಷೆ ನಡೆಸುವುದು ಹಾಗೂ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುವುದು ಎಂದು ಕೌಶಲ್ಯ ಅಭಿವೃದ್ಧಿ ಇಲಾಖೆ ತಿಳಿಸಿದೆ. ರಾಜ್ಯದ ಆರೋಗ್ಯ ಸಿಬ್ಬಂದಿಗಳಿಗೂ ಕೂಡ ಜರ್ಮನ್ ಭಾಷೆಯಲ್ಲೇ ತರಬೇತಿ ನೀಡಲು ಮುಂದಾಗಿದೆ. ಯಾಕೆಂದರೆ ಜರ್ಮನ್​​​ನಲ್ಲಿ ನರ್ಸ್​ಗಳ ಅವಶ್ಯಕತೆ ಹೆಚ್ಚಿದೆ. ಈ ಕಾರಣಕ್ಕಾಗಿ ಕೋರ್ಸ್​​ನಲ್ಲಿ ಇವರಿಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ.

ಸರ್ಕಾರಿ ಕೇಂದ್ರದಲ್ಲಿ ನಡೆಯುವ ಜರ್ಮನ್ ಭಾಷಾ ಪರೀಕ್ಷೆಗೆ ಯಾರು ಬೇಕಾದರೂ ಅರ್ಜಿಯನ್ನು ಅಥವಾ ನೋಂದಾಣಿಯನ್ನು ಮಾಡಿಕೊಳ್ಳಬಹುದು. ಇನ್ನು ಇದಕ್ಕಾಗಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಜರ್ಮನ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಹೆಲ್ತ್‌ಕೇರ್ ಪ್ರೊಫೆಷನಲ್ಸ್ (ಡಿಎಫ್‌ಎ) ಜೊತೆ ಒಪ್ಪಂದ ಮಾಡಿಕೊಂಡಿದೆ. “ನಾವು ಪರೀಕ್ಷಾ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ ನಂತರ, ಜರ್ಮನಿಯ ತಂಡವು ಈ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಯೋಜನೆ ಹಾಕಿಕೊಳ್ಳುತ್ತದೆ. ಇದಕ್ಕೂ ಮೊದಲು ಜರ್ಮನಿನ ಅಧಿಕಾರಿಗಳು ಸೌಲಭ್ಯಗಳನ್ನು ಪರಿಶೀಲನೆ ನಡೆಸಲು ಕರ್ನಾಟಕ ತಾಂತ್ರಿಕ ತರಬೇತಿ ಸಂಸ್ಥೆಗೆ ಭೇಟಿ ನೀಡುತ್ತಾರೆ. ಈಗಾಗಲೇ ಮನವಿಯನ್ನು ಸಲ್ಲಿಸಲಾಗಿದೆ. ಅನುಮೋದನೆ ಒಂದು ಬಾಕಿ ಇದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಾಗರಾಜ ಎನ್.ಎಂ. ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಅಥವಾ ಆಸ್ಪತ್ರೆಗಳಲ್ಲಿ ಕೆಲಸ ಮಾಡವ ಸಿಬ್ಬಂದಿಗಳು ಅಕ್ಟೋಬರ್ ಅಂತ್ಯದವರೆಗೆ ಜರ್ಮನ್, ಜಪಾನೀಸ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇಂಗ್ಲಿಷ್ ಭಾಷಾ ತರಬೇತಿಗಾಗಿ ನೋಂದಾಯಿಸಿಕೊಳ್ಳಬಹುದು. ಇನ್ನು ಕಾರ್ಮಿಕರು ಈ ಕೋರ್ಸ್‌ಗಳಿಗೆ ಉಚಿತವಾಗಿ ದಾಖಲಾಗಬಹುದು ಎಂದು ಕೆವಿಟಿಎಸ್‌ಡಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಈ ಉಚಿತ ತರಬೇತಿ ಕಾರ್ಯಕ್ರಮಗಳಲ್ಲಿ 800 ಕ್ಕೂ ಹೆಚ್ಚು ದಾದಿಯರು ನೋಂದಾಣಿ ಮಾಡಿಕೊಂಡಿದ್ದಾರೆ. ಜರ್ಮನಿಯಲ್ಲಿ ಆರೋಗ್ಯ ವೃತ್ತಿಪರರಿಗೆ ಭಾರಿ ಬೇಡಿಕೆ ಇರುವುದರಿಂದ ಹಾಗೂ ಕಾರ್ಮಿಕರಿಗೆ ವಿದೇಶದಲ್ಲಿ ಉದ್ಯೋಗ ಪಡೆಯಲು ಸಹಾಯ ಮಾಡಲು ಈ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. ಜರ್ಮನಿಯಲ್ಲಿ ಆರೋಗ್ಯ ಸಿಬ್ಬಂದಿಗಳ ಅವಶ್ಯಕತೆ ಇದೆ. ಈ ಕಾರಣದಿಂದ ಕನಿಷ್ಠ 10,000 ಆರೋಗ್ಯ ವೃತ್ತಿಪರರನ್ನು, ವಿಶೇಷವಾಗಿ ದಾದಿಯರು ಬೇಕಾಗಿದೆ. ಇದಕ್ಕಾಗಿ ಜರ್ಮನಿ ಭಾಷೆಯಲ್ಲಿ ತರಬೇತಿಯನ್ನು ಪಡೆದು ಕೆಲಸಕ್ಕೆ ಅಲ್ಲಿಗೆ ಹೋಗುಬಹುದು ಎಂದು ನಾಗರಾಜ ಎನ್.ಎಂ. ಹೇಳಿದ್ದಾರೆ.

ಇದನ್ನೂ ಓದಿ : ರಷ್ಯಾದಿಂದ ಭಾರತೀಯ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಸರ್ಕಾರದ ಉಚಿತ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅದರಲ್ಲೂ ಆರೋಗ್ಯ ವೃತ್ತಿಪರರು http://nursesflt.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು.ಕರ್ನಾಟಕದ ನುರಿತ ವೃತ್ತಿಪರರಿಗೆ ವಿದೇಶಿ ಭಾಷೆಗಳಲ್ಲಿ ತರಬೇತಿ ನೀಡುವ ಮೂಲಕ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಪ್ರಮಾಣೀಕರಣಗಳನ್ನು ನೀಡುವ ಮೂಲಕ ಸುರಕ್ಷಿತ, ನೈತಿಕ ಮತ್ತು ಮಾನವೀಯ ವಲಸೆ ನೀತಿಗಳನ್ನು ಉತ್ತೇಜಿಸುವ ಕೆಲಸವನ್ನು ಕೂಡ ಈ ಕೇಂದ್ರಗಳು ಮಾಡುತ್ತದೆ ಎಂದು ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 8 October 25