Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಳೆ ರಾಜ್ಯಾದ್ಯಂತ TET ಪರೀಕ್ಷೆ; ಇಲ್ಲಿದೆ ಮಾಹಿತಿ

ಅಧಿಕೃತ ಅಧಿಸೂಚನೆಯ ಪ್ರಕಾರ, ಪರೀಕ್ಷೆಯ ಮೊದಲ ಪತ್ರಿಕೆಯು ಬೆಳಿಗ್ಗೆ 09:30 ರಿಂದ ಮಧ್ಯಾಹ್ನ 12:00 ರವರೆಗೆ ನಡೆಯಲಿದ್ದು, ಎರಡನೇ ಪತ್ರಿಕೆಯು ಮಧ್ಯಾಹ್ನ 02:00 ರಿಂದ ಸಂಜೆ 04:30 ರವರೆಗೆ ನಡೆಯಲಿದೆ. ಪರೀಕ್ಷೆಯ ಅವಧಿಯು 2.30 ನಿಮಿಷಗಳು ನಿಗದಿಪಡಿಸಲಾಗಿದೆ.

ಬೆಂಗಳೂರು: ನಾಳೆ ರಾಜ್ಯಾದ್ಯಂತ TET ಪರೀಕ್ಷೆ; ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 02, 2023 | 8:31 PM

ಬೆಂಗಳೂರು, ಸೆ.02: ರಾಜ್ಯಾದ್ಯಂತ ನಾಳೆ(ಸೆ.03) ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಎರಡು ಅರ್ಹತಾ ಪರೀಕ್ಷೆ ನಡೆಸಲು ಪರೀಕ್ಷಾ ಮಂಡಳಿ ಮುಂದಾಗಿದೆ. ಅದರಂತೆ ರಾಜ್ಯದ 35 ಶೈಕ್ಷಣಿಕ ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ (TET Exam) ಏರ್ಪಡಿಸಲಾಗಿದೆ. ಇನ್ನು ಅಧಿಕೃತ ಅಧಿಸೂಚನೆಯ ಪ್ರಕಾರ, ಪರೀಕ್ಷೆಯ ಮೊದಲ ಪತ್ರಿಕೆಯು ಬೆಳಿಗ್ಗೆ 09:30 ರಿಂದ ಮಧ್ಯಾಹ್ನ 12:00 ರವರೆಗೆ ನಡೆಯಲಿದ್ದು, ಎರಡನೇ ಪತ್ರಿಕೆಯು ಮಧ್ಯಾಹ್ನ 02:00 ರಿಂದ ಸಂಜೆ 04:30 ರವರೆಗೆ ನಡೆಯಲಿದೆ. ಪರೀಕ್ಷೆಯ ಅವಧಿಯು 2.30 ನಿಮಿಷಗಳು ನಿಗದಿಪಡಿಸಲಾಗಿದೆ.

ಇನ್ನು ರಾಜ್ಯದಾದ್ಯಂತ ವಿವಿಧ ಶಾಲಾ ಹಂತಗಳಲ್ಲಿ ಬೋಧಕ ಹುದ್ದೆಗಳಿಗೆ ಸೂಕ್ತವಾದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಈ ಪರೀಕ್ಷೆಯನ್ನು ನಡೆಸುತ್ತಿದೆ. ಪತ್ರಿಕೆ -1, 1 ರಿಂದ 5 ನೇ ತರಗತಿ ಭೋದಿಸುವ ಶಿಕ್ಷಕರಿಗಾಗಿ ನಡೆಸಲಾಗುತ್ತಿದ್ದು, 1,43,705 ಅರ್ಜಿ ಸಲ್ಲಿಕೆಯಾಗಿದೆ. 544 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಪತ್ರಿಕೆ -2, ಇದನ್ನು 6 ರಿಂದ 8 ನೇ ತರಗತಿ ಭೋದಿಸುವ ಶಿಕ್ಷಕರಿಗಾಗಿ ನಡೆಸಲಾಗಿದ್ದು, 1,89,994 ಅರ್ಜಿ ಸಲ್ಲಿಕೆಯಾಗಿದೆ. ಮತ್ತು 711 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಗಳನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ:KARTET 2022: ಟಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಡೌನ್‌ಲೋಡ್‌ ಮಾಡುವ ಕ್ರಮ ಇಲ್ಲಿದೆ

ರಾಜ್ಯದಲ್ಲಿ ಖಾಲಿಯಿರುವ ಶಿಕ್ಷಕರನ್ನು ತುಂಬಿಕೊಳ್ಳುವ ಸಲುವಾಗಿ DSE ಕರ್ನಾಟಕವು (ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ) ಜುಲೈ 14 ರಂದು KARTET 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಬಳಿಕ ಪರೀಕ್ಷೆಯನ್ನು ಸೆಪ್ಟಂಬರ್​ 3 ರಂದು ನಡೆಸಲಾಗುವುದು ಎಂದು ತನ್ನ ವೆಬ್​ಸೈಟ್​ಲ್ಲಿ ತಿಳಿಸಿತ್ತು. ಇದೀಗ ನಾಳೆ ಪರೀಕ್ಷೆ ನಡೆಯುತ್ತಿದೆ.

ಮತ್ತಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ