Student Bus Pass: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ದಿನಾಂಕ ವಿಸ್ತರಣೆ

|

Updated on: Jun 14, 2023 | 9:43 PM

ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ಬಸ್​ ಪಾಸ್ ಪಡೆಯಲು ಕಾಲಾವಕಾಶ ನೀಡಲಾಗಿತ್ತು. ಪಾಸ್ ಸಿಗುವವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ನೀಡಲಾಗಿತ್ತು. ಸದ್ಯ ಇದರ ಗಡುವನ್ನು ಸಾರಿಗೆ ನಿಗಮವು ವಿಸ್ತರಣೆ ಮಾಡಿದೆ.

Student Bus Pass: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ದಿನಾಂಕ ವಿಸ್ತರಣೆ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ದಿನಾಂಕ ವಿಸ್ತರಣೆ ಮಾಡಿದ ಕೆಎಸ್​ಆರ್​ಟಿಸಿ
Follow us on

ಬೆಂಗಳೂರು: ಸೇವಾಸಿಂಧು ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ (Student bus pass) ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶದ ಅವಶ್ಯಕತೆ ಇರುವುದನ್ನು ಗಮನಿಸಿದ ಕೆಎಸ್​ಆರ್​ಟಿಸಿ (KSRTC), ವಿದ್ಯಾರ್ಥಿಗಳಿಗೆ ನೀಡಿದ ಉಚಿತ ಬಸ್ ಪ್ರಯಾಣದ ದಿನಾಂಕವನ್ನು ವಿಸ್ತರಣೆ ಮಾಡಿದೆ. ಅದರಂತೆ, ಜೂನ್ 15ರ ವರೆಗೆ ಇದ್ದ ಗಡುವು ಇದೀಗ ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.

2023-24ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಲು ಕಾಲಾವಕಾಶ ನೀಡುವ ಸಂಬಂಧ ಜೂನ್ 15 ರ ವರೆಗೆ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಲು ಮತ್ತಷ್ಟು ಕಾಲಾವಕಾಶ ನೀಡಬೇಕಾಗಿದೆ. ಇದರ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ನೀಡಿಕೊಳ್ಳಲು ಉಚಿತ ಪ್ರಯಾಣದ ಅವಕಾಶವನ್ನು ಜೂನ್ 30ರ ವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ನಾನ್​-ಎಸಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರೈಲ್ವೆ, ಎಸಿ ಬಸ್​ಗಳ ಟಿಕೆಟ್​ ಸಂಗ್ರಹಕ್ಕೆ ಹೊಡೆತ

ಆದೇಶದ ಪ್ರಕಾರ, ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ ಅಥವಾ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡ ಸಂದರ್ಭದಲ್ಲಿ ನೀಡಲಾಗಿದ್ದ ಶುಲ್ಕ ಪಾವತಿ ರಸೀದಿ ಅಥವಾ 2022-23ನೇ ಸಾಲಿನ ವಿದ್ಯಾರ್ಥಿ ಬಸ್​ ಪಾಸ್ ತೋರಿಸಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರು ರಾಜ್ಯದೊಳಗೆ ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.

ಈಗಾಗಲೇ 2023-24ನೇ ಸಾಲನ ಶೈಕ್ಷಣಿಕ ವರ್ಷದ ಚಟುವಟಕೆಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಕೋರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು ಜೂನ್​ 12 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಪಾಸ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್‌ ಪಾಸ್‌ಗಳನ್ನು ವಿತರಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Wed, 14 June 23