ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

II PU 2nd Supplementary Exam: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯೂ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ನಿಗದಿಯಂತೆ ಆಗಸ್ಟ್​ 21ರಿಂದ ಸೆಪ್ಟೆಂಬರ್​ 2ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್​​ಟಿಸಿ ನಿಗಮವು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ
ಪ್ರಾತಿನಿಧಿಕ ಚಿತ್ರ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on: Aug 12, 2023 | 5:33 PM

ಬೆಂಗಳೂರು, ಆಗಸ್ಟ್​ 12: ಆಗಸ್ಟ್​ 21ರಿಂದ ಸೆಪ್ಟೆಂಬರ್​ 2ರವರೆಗೆ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ (II PU 2nd Supplementary Exam) ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್​​ಟಿಸಿ ನಿಗಮವು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಈ ಕುರಿತಾಗಿ ಕೆಎಸ್​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶಪತ್ರ ತೋರಿಸು ಮೂಲಕ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಿಗಮದ ನಗರ ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆಯು ಜುಲೈ 17 2023 ರಂದು ನಡೆಸಲಾಗಿತ್ತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್​ ಆಗಸ್ಟ್ 01 ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 12 ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿತ್ತು.

ಇದನ್ನೂ ಓದಿ: CBSE 12th Supplementary Result: ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ 2023 ಪ್ರಕಟ; ಪರಿಶೀಲಿಸಲು ನೇರ ಲಿಂಕ್

2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹತೆ ಪಡೆದಿರುತ್ತಾರೆ.

2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.  

  • ಆ. 21ರಂದು ಕನ್ನಡ, ಅರೇಬಿಕ್
  • ಆ. 22 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್
  • ಆ. 23 ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
  • ಆ. 24 ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್
  • ಆ. 25 ಇತಿಹಾಸ, ಸ್ಟಾಟಸ್ಟಿಕ್ಸ್
  • ಆ. 26 ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್
  • ಆ. 28 ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್
  • ಆ. 29 ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್
  • ಆ. 30 ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್
  • ಆ. 31 ಹಿಂದಿ
  • ಸೆಪ್ಟೆಂಬರ್.​ 1ರಂದು ಎಕನಾಮಿಕ್ಸ್, ಬಯಾಲಜಿ
  • ಸೆ. 2ರಂದು ತಮಿಳ್, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ