Students Mental Health: ಓದುತ್ತಿರುವ ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡಲು ಈ ಸಿಂಪಲ್ ಟಿಪ್ಸ್ ​ ಟ್ರೈ ಮಾಡಿ

ಇಂದಿನ ಆಧುನಿಕ ಯುಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಹೀಗಾಗಿ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಮಾನಸಿಕ ಒತ್ತಡ ಹಾಗೂ ಆತಂಕದಂತಹ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದು ಮಕ್ಕಳ ಬೆಳವಣಿಗೆ ಹಾಗೂ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಹೀಗಾಗಿ ಬೆಂಗಳೂರಿನ ಹೊರಮಾವು ರಾಯನ್​ ಇಂಟರ್ನ್ಯಾಷನಲ್​​ ಅಕಾಡೆಮಿ ಪ್ರಾಂಶುಪಾಲರಾದ ಎಂಎಸ್​​ ಎಸ್​​ ಆಯಿಷಾ ಅವರು ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯವನ್ನು ಉತ್ತೇಜಿಸಲು ಕೆಲವು ಸಲಹೆ ಗಳನ್ನು ನೀಡಿದ್ದು, ಆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ

Students Mental Health: ಓದುತ್ತಿರುವ ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡಲು ಈ ಸಿಂಪಲ್ ಟಿಪ್ಸ್ ​ ಟ್ರೈ ಮಾಡಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 15, 2024 | 8:46 PM

ಇಂದಿನ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡವು ಹೆಚ್ಚುತ್ತಿದೆ. ಶೈಕ್ಷಣಿಕ ಒತ್ತಡಗಳು ಮತ್ತು ಡಿಜಿಟಲ್ ಪರದೆಯ ಮೇಲೆ ಹೆಚ್ಚು ಸಮಯ ಕಳೆಯುವುದರಿಂದ ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಈ ಮಾನಸಿಕ ಸಮಸ್ಯೆಗಳು ದೀರ್ಘಕಾಲದಾಗಿದ್ದು, ಮಕ್ಕಳ ಬೆಳವಣಿಗೆಯನ್ನೇ ಕುಂಠಿತಗೊಳಿಸಬಲ್ಲದು. ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆಯು ಕಳೆದ ಐದು ವರ್ಷಗಳಲ್ಲಿ ಶಾಲೆಗೆ ಹೋಗುವ ಮಕ್ಕಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಲ್ಲಿ 15% ಹೆಚ್ಚಳವಾಗಿದೆ ಎಂದು ವರದಿ ಮಾಡಿದೆ. ಮಕ್ಕಳ ಮಾನಸಿಕ ಆರೋಗ್ಯದ ಕಾಪಾಡಲು ಶಿಕ್ಷಕ ವೃಂದ ಹಾಗೂ ಪೋಷಕರು ಮಕ್ಕಳ ಸಮಸ್ಯೆಗಳನ್ನು ಅರಿತು ಅದಕ್ಕೆ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ. ಇದೀಗ ಬೆಂಗಳೂರಿನ ಹೊರಮಾವು ರಾಯನ್​ ಇಂಟರ್ನ್ಯಾಷನಲ್​​ ಅಕಾಡೆಮಿ ಪ್ರಾಂಶುಪಾಲರಾದ ಎಂಎಸ್​​ ಎಸ್​​ ಆಯಿಷಾ ಅವರು ವಿದ್ಯಾರ್ಥಿಗಳಲ್ಲಿ ಉತ್ತಮ ಮಾನಸಿಕ ಆರೋಗ್ಯವನ್ನು ಉತ್ತೇಜಿಸಲು ಕೆಲವು ಸಲಹೆಗಳನ್ನು ನೀಡಿದ್ದಾರೆ.

  1. ಡಿಜಿಟಲ್ ಪರದೆಯ ಸಮಯವನ್ನು ಕಡಿಮೆ ಮಾಡುವುದು : ಇಂದಿನ ತಂತ್ರಜ್ಞಾನ ಯುಗದಲ್ಲಿ, ಪರದೆಯ ಸಮಯವನ್ನು ಕಡಿಮೆ ಮಾಡುವುದು ಮಾನಸಿಕ ಯೋಗಕ್ಷೇಮಕ್ಕೆ ಅತ್ಯಗತ್ಯವಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ನಡೆಸಿದ ಅಧ್ಯಯನದಲ್ಲಿ, ಪ್ರತಿದಿನ 7 ಗಂಟೆಗಳಿಗಿಂತ ಹೆಚ್ಚು ಕಾಲ ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಡಿಜಿಟಲ್ ಸಾಧನಗಳನ್ನು ಬಳಸುವ ಯುವಕರು ಮಾನಸಿಕ ಆರೋಗ್ಯ ಸಮಸ್ಯೆಯನ್ನು ಅನುಭವಿಸುವ ಸಾಧ್ಯತೆ ಎರಡು ಪಟ್ಟು ಹೆಚ್ಚು ಎಂದು ಬಹಿರಂಗಪಡಿಸಿದೆ. ಹೀಗಾಗಿ ಡಿಜಿಟಲ್ ಸಾಧನಗಳ ಬಳಕೆಯನ್ನು ಮಿತಿಯಲ್ಲಿಡಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಊಟದ ಸಮಯ ಹಾಗೂ ಮಲಗುವ ಮುನ್ನ ಡಿಜಿಟಲ್ ಸಾಧನಗಳ ಬಳಕೆಯನ್ನು ಕಡಿಮೆ ಮಾಡುವಂತಹ ಅಭ್ಯಾಸಗಳನ್ನು ಪ್ರೋತ್ಸಾಹಿಸಬೇಕು. ಇದು ಮಕ್ಕಳಲ್ಲಿ ಉಂಟಾಗುವ ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  2. ದೈಹಿಕ ಚಟುವಟಿಕೆಗೆ ಹೆಚ್ಚು ಒತ್ತು ನೀಡುವುದು: ದೈಹಿಕ ಚಟುವಟಿಕೆಯು ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ, ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಿಯಮಿತ ವ್ಯಾಯಾಮವು ಎಂಡಾರ್ಫಿನ್ ಗಳನ್ನು ಬಿಡುಗಡೆ ಮಾಡುತ್ತದೆ. ದೇಹದಿಂದ ಬಿಡುಗಡೆಯಾಗುವ ಈ ನೈಸರ್ಗಿಕ ಮೂಡ್ ಎಲಿವೇಟರ್‌ಗಳು ಆತಂಕ ಮತ್ತು ಖಿನ್ನತೆಯನ್ನು ನಿವಾರಿಸುತ್ತದೆ. ಹೀಗಾಗಿ ದೈಹಿಕ ಚಟುವಟಿಕೆಗಳಾದ ಯೋಗ, ನಡಿಗೆಯಂತಹ ಅಭ್ಯಾಸವನ್ನು ಅಳವಡಿಸಿಕೊಳ್ಳಬೇಕು. ಕ್ರೀಡೆ, ನೃತ್ಯ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಮಕ್ಕಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವುದು ಮಾನಸಿಕ ಆರೋಗ್ಯವನ್ನು ಕಾಪಾಡಲು ಸಾಧ್ಯ.
  3. ನಿದ್ರೆಯ ಅಗತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳುವುದು : ಮಾನಸಿಕ ಆರೋಗ್ಯ ಕಾಪಾಡುವಲ್ಲಿ ನಿದ್ರೆಯೂ ಅತ್ಯಗತ್ಯ. ಮಾನಸಿಕವಾಗಿ ಆರೋಗ್ಯವಂತರಾಗಿರಲು ಹದಿಹರೆಯದವರಿಗೆ 8 ರಿಂದ 10 ಗಂಟೆಗಳ ನಿದ್ದೆ ಬೇಕು. ಡಿಜಿಟಲ್ ಸಾಧನಗಳ ಬಳಕೆ, ಶೈಕ್ಷಣಿಕ ಒತ್ತಡವು ನಿದ್ದೆಯ ಗುಣಮಟ್ಟವನ್ನು ಕಡಿಮೆಗೊಳಿಸುತ್ತಿದೆ. ಹೀಗಾಗಿ ಶಿಕ್ಷಣತಜ್ಞರು ಕಟ್ಟುನಿಟ್ಟಾದ ನಿದ್ರೆಯ ವೇಳಾಪಟ್ಟಿಯನ್ನು ರಚಿಸಬೇಕು. ನಿದ್ರೆಯ ಪ್ರಯೋಜನಗಳನ್ನು ಒತ್ತಿಹೇಳಿ ಆರೋಗ್ಯಕರ ನಿದ್ದೆಯನ್ನು ಹೆಚ್ಚು ಉತ್ತೇಜಿಸುವುದು ಅಗತ್ಯ.
  4. ಸಾಮಾಜಿಕ ಸಂಬಂಧಗಳನ್ನು ಸುಧಾರಿಸುವುದು : ತನ್ನ ಸುತ್ತಮುತ್ತಲಿನ ಸಂಬಂಧಗಳು ಮಕ್ಕಳ ಮನಸ್ಥಿತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ಬಲವಾದ ಬೆಂಬಲವಿರುವ ವಿದ್ಯಾರ್ಥಿಗಳು 50% ಹೆಚ್ಚಿನ ಭಾವನಾತ್ಮಕ ನಿಯಂತ್ರಣವನ್ನು ಹೊಂದಿರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಶಾಲಾ ವಾತಾವರಣವು ಸಕಾರಾತ್ಮಕ ಸಂಬಂಧಗಳನ್ನು ಉತ್ತೇಜಿಸುವಂತಿರಬೇಕು..ಗೆಳೆಯರ ಮಾರ್ಗದರ್ಶನ, ಗುಂಪು ಯೋಜನೆಗಳು, ಸಾಮಾಜಿಕ ಕ್ಲಬ್‌ಗಳಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನೈತಿಕತೆಯನ್ನು ಸುಧಾರಿಸಲು ಸಹಕಾರಿಯಾಗಿದೆ. ಅದಲ್ಲದೇ ಶಿಕ್ಷಕರು ಸ್ನೇಹಿತರು, ಶಿಕ್ಷಕರು ಮತ್ತು ಕುಟುಂಬದೊಂದಿಗೆ ಉತ್ತಮ ಸಂಬಂಧವನ್ನು ನಿರ್ಮಿಸಲು ಸಹಾಯ ಮಾಡುತ್ತದೆ.
  5. ಒತ್ತಡ ನಿರ್ವಹಣೆ ತಂತ್ರಗಳನ್ನು ಅಳವಡಿಸಿಕೊಳ್ಳುವುದು : ಈಗಿನ ಆಧುನಿಕ ಶಿಕ್ಷಣ ಪದ್ಧತಿಯಿಂದ ಮಕ್ಕಳು ಒತ್ತಡವನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಶೈಕ್ಷಣಿಕ ಮತ್ತು ಸಾಮಾಜಿಕ ಒತ್ತಡಗಳನ್ನು ನಿರ್ವಹಿಸುವುದು ಅತ್ಯಗತ್ಯ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸಂಶೋಧನೆಯ ಪ್ರಕಾರ, ಪ್ರಾಣಾಯಾಮ, ಧ್ಯಾನವು ಶೇ 35 ರಷ್ಟು ಆತಂಕವನ್ನು ಕಡಿಮೆ ಮಾಡುತ್ತದೆ.ಶಿಕ್ಷಕರು ಪಠ್ಯಕ್ರಮದಲ್ಲಿ ಒತ್ತಡ ನಿರ್ವಹಣೆ ಮಾಡುವುದು ಮುಖ್ಯ. ಹೆಚ್ಚು ಒತ್ತಡ ಹಾಗೂ ಆತಂಕ ಉಂಟು ಮಾಡುವ ಚಟುವಟಿಕೆಯನ್ನು ನೀಡುವ ಬದಲು, ಸರಿಯಾದ ವೇಳಾಪಟ್ಟಿ ರಚಿಸಿ ಶೈಕ್ಷಣಿಕ ಚಟುವಟಿಕೆಯನ್ನು ಹಂಚಿಕೆ ಮಾಡುವುದು ಅತ್ಯಗತ್ಯ. ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವುದು ಕೇವಲ ವೈಯುಕ್ತಿಕ ಯೋಗಕ್ಷೇಮವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಮಕ್ಕಳ ಸುಸ್ಥಿರ, ಆರೋಗ್ಯಕರ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 12 December 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?