ಕರ್ನಾಟಕ ವಿವಿಗಳ ವಿದ್ಯಾರ್ಥಿಗಳಿಗೆ ಲಂಡನ್ ಭಾಗ್ಯ: ಸರ್ಕಾರದ ವತಿಯಿಂದ ಈಸ್ಟ್ ಲಂಡನ್ ವಿವಿಗೆ ಶೈಕ್ಷಣಿಕ ಪ್ರವಾಸ

ಇತ್ತೀಚಿನ ದಿನಗಳಲ್ಲಿ ನಗರಗಳಿಗೆ ತೆರಳಿ ಉನ್ನತ ಶಿಕ್ಷಣ ಪಡಯುವುದೇ ಸವಾಲು ಎನ್ನುವಂತಾಗಿದೆ. ಇನ್ನು ಬಡ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಶಿಕ್ಷಣ ಪಡೆಯುವುದಂತೂ ಮರಿಚೀಕೆ. ಆದರೆ, ಇನ್ನುಮುಂದೆ ಬಡ ಮಕ್ಕಳ ಕನಸು ನನಸು ಮಾಡಲು ಸರ್ಕಾರ ಮುಂದಾಗಿದೆ. ಅದ್ಹೇಗೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ವಿವಿಗಳ ವಿದ್ಯಾರ್ಥಿಗಳಿಗೆ ಲಂಡನ್ ಭಾಗ್ಯ: ಸರ್ಕಾರದ ವತಿಯಿಂದ ಈಸ್ಟ್ ಲಂಡನ್ ವಿವಿಗೆ ಶೈಕ್ಷಣಿಕ ಪ್ರವಾಸ
ಲಂಡನ್ ಪ್ರವಾಸ ತೆರಳುವುದಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸಚಿವ ಡಾ. ಎಂಸಿ ಸುಧಾಕರ್ ಜತೆಗೆ
Edited By:

Updated on: Nov 09, 2024 | 11:04 AM

ಬೆಂಗಳೂರು, ನವೆಂಬರ್ 9: ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಹಾಗೂ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಬ್ರಿಟಿಷ್ ಕೌನ್ಸಿಲ್​ನೊಂದಿಗೆ ಮಾಡಿಕೊಂಡಿರುವ ಶೈಕ್ಷಣಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್​ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. ಅಲ್ಲಿನ ಕಲಿಕೆ, ಬೊಧನ ಶೈಲಿ ಹಾಗೂ ಹೊಸ ಕಲಿಕಾ ಮಾದರಿಗಳ ಪರಿಚಯ ಪಡೆಯುವುದರೊಂದಿಗೆ ಹೆಚ್ಚುವರಿ ಶಿಕ್ಷಣ ಪಡೆದಕೊಳ್ಳಲಿದ್ದಾರೆ.

ಅಷ್ಟೇ ಅಲ್ಲದೆ, ಕರ್ನಾಟಕದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕೂಡಾ ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ. ಈ ಪ್ರವಾಸ ಯಶಸ್ವಿಯಾದರೆ ಮುಂದಿನ ವರ್ಷದಿಂದ ರಾಜ್ಯದ ವಿವಿಗಳಿಗೆ ಪ್ರತಿ ವರ್ಷ ವಿದೇಶಿ ಪ್ರವಾಸ ಹಾಗೂ ಕಲಿಕಾ ಚಟುವಟಿ ಖಾತರಿಯಾಗಲಿದೆ.

ವಿವಿ ವಿದ್ಯಾರ್ಥಿಗಳ ಭವಿಷ್ಯದ ಕಲಿಕೆಯ ದೃಷ್ಟಿಯಿಂದ ಈ ಅಂತಾರಾಷ್ಟ್ರೀಯ ಪ್ರವಾಸ ಹಾಗೂ ಕಲಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಈಸ್ಟ್ ಲಂಡನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ವಿವರಗಳ ಕುರಿತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂಸಿ ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್​ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯ ತೆರಳಿರುವುದು ವಿದ್ಯಾರ್ಥಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಈ ಬಗ್ಗೆ ವಿದ್ಯಾರ್ಥಿನಿ ನಂದಿನಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ: ಹಾಜರಾತಿ ಹೆಚ್ಚಿಸಲು ಶಿಕ್ಷಕನ ವಿನೂತನ ಕೆಲಸ

ಒಟ್ಟಿನಲ್ಲಿ ರಾಜ್ಯದ ಸರ್ಕಾರಿ ವಿವಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಈ ವಿದೇಶಿ ಪ್ರವಾಸ ಹಾಗೂ ಹೆಚ್ಚುವರಿ ಕಲಿಕೆ ಸಾಕಷ್ಟು ಮಹತ್ವವನ್ನ ಪಡೆದುಕೊಂಡಿದೆ. ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us