AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್​ಗೆ ಯುವಿಸಿಇ ಶಿಫ್ಟ್​ಗೆ ವಿದ್ಯಾರ್ಥಿಗಳ ವಿರೋಧ

ಬೆಂಗಳೂರಿನ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಅನ್ನು ಐಐಟಿ ಮಾದರಿ ಮಾಡುತ್ತೇವೆ ಎಂದು ಸರ್ಕಾರ ಹೇಳಿದೆ. ಆದರೆ, ವರ್ಷ ಕಳೆದರೂ ಐಐಟಿ ಮಾದರಿ ಮಾಡುವ ಪ್ರಯತ್ನ ಮಾತ್ರ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್​ಗೆ ಯುವಿಸಿಇ ಶಿಫ್ಟ್​ಗೆ ವಿದ್ಯಾರ್ಥಿಗಳ ವಿರೋಧ
ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜು
Vinay Kashappanavar
| Edited By: |

Updated on:Sep 29, 2024 | 9:00 AM

Share

ಬೆಂಗಳೂರು, ಸೆಪ್ಟೆಂಬರ್​ 29: ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್​ (UVCE) ಅನ್ನು ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಕ್ಯಾಂಪಸ್​ಗೆ ಶಿಫ್ಟ್ ಮಾಡುತ್ತೇವೆ, ಐಐಟಿ ಮಾದರಿಯಲ್ಲಿ ಮಾಡುತ್ತೇವೆ ಅಂತ ಹೇಳಿ ಸರ್ಕಾರ ಶುಲ್ಕ ಏರಿಕೆಗೆ ಮುಂದಾಗಿದ್ದನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೆ.ಆರ್‌. ವೃತ್ತದಲ್ಲಿರುವ ಯುವಿಸಿಇ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜುಗೆ ಹೈಟೆಕ್‌ ಸ್ಪರ್ಶ ನೀಡುವುದಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಹೇಳಿತ್ತು. ಶತಮಾನ ಕಂಡ ಜ್ಞಾನ ದೇಗುಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿದ್ಯಾಸಂಸ್ಥೆಯ ಕಟ್ಟಡಕ್ಕೆ ಐಐಟಿ ದರ್ಜೆಯ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಲಾಗಿತ್ತು. ಪುಲ್ ಹೈಟೆಕ್ ಮಾಡುತ್ತೇವೆ ಅಂತ ಹೇಳಿ ಅದಕ್ಕೆ ತಕ್ಕಂತಹ ಯಾವ ಪ್ರಯತ್ನವೂ ನಡೆಯಲಿಲ್ಲ.

ಈಗಿನ ಸರ್ಕಾರ ಮುಂದಿನ ದಿನಗಳಲ್ಲಿ ಯುವಿಸಿಇ ಸಂಸ್ಥೆಯನ್ನು ನೈಜ ಐಐಟಿ ಮಾದರಿಯಲ್ಲಿ ಸೌಲಭ್ಯ ನೀಡಿ ಮೇಲ್ದರ್ಜೆಗೆ ಏರಿಸುತ್ತೇವೆ. ಜೊತೆಗೆ ಬೆಂಗಳೂರು ವಿವಿ ಆವರಣದಲ್ಲಿ ಇರುವ 50 ಎಕರೆ ಜಾಗದಲ್ಲಿ ಕ್ಯಾಂಪಸ್ ಸ್ಥಳಾಂತರ ಮಾಡುವ ಬಗ್ಗೆ ಹೇಳಿದೆ. ಈಗಾಗಲೇ ಸರ್ಕಾರ ಪ್ರಾರಂಭಿಕ ಹಂತದಲ್ಲಿ 100 ಕೋಟಿ ಅನುದಾನ ನೀಡಿದ್ದು, ಉನ್ನತ್ತ ಶಿಕ್ಷಣ ಸಚಿವ ಸುಧಾಕರ್ ನೇತೃತ್ವದ ತಜ್ಞರ ಸಮಿತಿ ದೇಶದ ಪ್ರತಿಷ್ಠಿತ ಐಐಟಿ ವಿವಿಗೆ ಭೇಟಿ ನೀಡಿ ಮಾಹಿತಿ ಪಡೆದಿದೆ. ಬೆಂಗಳೂರು ವಿವಿ ಕ್ಯಾಂಪಸ್​​​​ಗೆ ಶಿಫ್ಟ್ ಗೂ ತಯಾರಿ ನಡೆದಿದೆ.

ಐಐಟಿ ಮಾದರಿ ಹೆಸರಿನಲ್ಲಿ ಉನ್ನತ್ತ ಶಿಕ್ಷಣ ಇಲಾಖೆ ವರ್ಷದಿಂದ ವರ್ಷಕ್ಕೆ ಶುಲ್ಕ ಏರಿಕೆ ಮಾಡುತ್ತಿದೆ. ಕಳೆದ ಎರಡು ವರ್ಷಗಳಲ್ಲಿಯೇ ಕಾಲೇಜಿನ ಶುಲ್ಕ ದುಪ್ಪಟ್ಟಾಗಿದೆ. 47,000 ರೂ. ಶುಲ್ಕ ಪ್ರತಿ ವರ್ಷ ಭರಿಸಬಹುದಾದಂತಹವರು ಮಾತ್ರ ಈ ಕಾಲೇಜಿಗೆ ಪ್ರವೇಶ ಪಡೆಯಬಹುದೆಂಬ ಪರಿಸ್ಥಿತಿ ಸೃಷ್ಟಿಯಾಗಿದೆ.

ಇನ್ನೊಂದೆಡೆ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರ ತೀರ್ವ ಕೊರತೆಯಿದೆ. ಸರ್ಕಾರ ಒಂದೆಡೆ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆಯನ್ನು ಹೊರೆಸಿದೆ. ಇನ್ನೊಂದೆಡೆ 100 ಕೋಟಿ ಮಂಜೂರು ಮಾಡಿ ಜ್ಞಾನ ಭಾರತಿ ವಿಶ್ವವಿದ್ಯಾಲಯದಲ್ಲಿ 50 ಎಕರೆ ಜಾಗದಲ್ಲಿ ಐಐಟಿ ಮಾದರಿಯ ಹೊಸ ಕಟ್ಟಡ ಕಟ್ಟಲು ರಾಜ್ಯ ಸರ್ಕಾರ ಮುಂದಾಗಿರುವುದು ವಿದ್ಯಾರ್ಥಿಗಳ ವಿರೋಧಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿಯಂತೆ ಎಸ್​​ಎಸ್​ಎಲ್​ಸಿ ಪರೀಕ್ಷೆಯಲ್ಲೂ ಮಹತ್ವದ ಬದಲಾವಣೆಗೆ ಪ್ಲಾನ್

ಕೆ.ಆರ್ ವೃತ್ತದಲ್ಲಿರುವ 106 ವರ್ಷಗಳ ಇತಿಹಾಸ ಹೊಂದಿರುವ ವಿಶ್ವೇಶ್ವರಯ್ಯನವರ ಕನಸಿನ ಕಾಲೇಜು ಕಟ್ಟಡವಿದೆ. ಈ ನಡುವೆಯೂ ಸರ್ಕಾರ ಮತ್ತೆ 100 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಇದೇ ಕಾರಣಕ್ಕೆ ವರ್ಷದಿಂದ ವರ್ಷಕ್ಕೆ ಸರ್ಕಾರ ಶುಲ್ಕ ಏರಿಕೆ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪ ಮಾಡಿದ್ದಾರೆ.

100 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡಕ್ಕೆ ಸರ್ಕಾರ ಮುಂದಾಗಿದ್ದು, ಈಗಿರುವ ಕಟ್ಟಡದ ಭವಿಷ್ಯವೇನು ಎಂಬ ಪ್ರಶ್ನೆ ಉದ್ಭವಿಸಿದೆ. ಈ ನಡುವೆ ಶುಲ್ಕ ಏರಿಕೆ ಪೋಷಕರಿಗೆ ಹೊರೆಯಾಗಿದ್ದು, ಐಐಟಿ ಮಾಡಲ್ ಕಟ್ಟಡ ಬೇಕಾ? ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ ಐತಿಹಾಸಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಯುವಿಸಿಇಯನ್ನು ಐಐಟಿ ಮಾದರಿ ಮಾಡುತ್ತೇವೆ, ಹೈಟೆಕ್ ಮಾಡುತ್ತೇವೆ ಅಂತ ಕಟ್ಟಡಕ್ಕೆ ಸುಣ್ಣ ಬಣ್ಣ ಬಳೆದದ್ದು ಬಿಟ್ಟರೆ ಬೇರೇನೂ ಆಗುತ್ತಿಲ್ಲ. ಹೀಗಾಗಿ ಇನ್ನು ಮುಂದಾದರು ಸರ್ಕಾರ ಅದಷ್ಟು ಬೇಗ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಐತಿಹಾಸಿಕ ಶಿಕ್ಷಣ ಸಂಸ್ಥೆ ಉಳಸಿ ಬೆಳಸವುತ್ತ ಗಮನ ಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Sun, 29 September 24

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ