ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಇಟಿ ಬೋರ್ಡ್ ಕಚೇರಿ ಮುಂದೆ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಧರಣಿ ಹಿನ್ನೆಲೆ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
Follow us
| Updated By: ganapathi bhat

Updated on:Dec 22, 2021 | 9:55 PM

ಬೆಂಗಳೂರು: ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಹೆಲ್ತ್​​ಸೈನ್ಸ್​​ಗೆ ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಕಚೇರಿಯ ಮುಂದೆ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಇಟಿ ಬೋರ್ಡ್ ಕಚೇರಿ ಮುಂದೆ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಧರಣಿ ಹಿನ್ನೆಲೆ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಇಂದು ದಾಖಲೆಗಳ ಪರಿಶೀಲನೆ ಕರೆಯಲಾಗಿತ್ತು. ಎಲ್ಲ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಕಷ್ಟ ಸಾಧ್ಯ ಆಗಿದೆ. ಮುಂಜಾನೆ 6 ಗಂಟೆಯಿಂದ ಕಾಯುತ್ತಿದ್ದರೂ ಪರಿಶೀಲನೆ ಕಾರ್ಯ ಆಗಿಲ್ಲ. ಕೊನೆಗೆ ವಿದ್ಯಾರ್ಥಿಗಳ ಪ್ರತಿಭಟನೆ ಮಣಿದು ನಿರ್ಧಾರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರತಿಭಟನೆ ಹಿನ್ನೆಲೆ ಎಡವಟ್ಟಿನ ನಿರ್ಧಾರ ಕೈಬಿಟ್ಟ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಆಯಾ ಜಿಲ್ಲಾ ಕೇಂದ್ರಗಳಲ್ಲೇ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಲು ತೀರ್ಮಾನಿಸಿದೆ.

ನಾಳೆಯಿಂದ ಮೂರು ದಿನಗಳ ಕಾಲ ದಾಖಲೆಗಳ‌ ಪರಿಶೀಲನೆ ನಡೆಸಲಾಗುತ್ತದೆ. ಸ್ಥಳದ ಕುರಿತು ಸದ್ಯದಲ್ಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಪರೀಕ್ಷಾ ಪ್ರಾಧಿಕಾರ ನಿರ್ವಹಣಾ ನಿರ್ದೇಶಕಿ ರಮ್ಯಾ ಹೇಳಿಕೆ ನೀಡಿದ್ದಾರೆ. ಊರುಗಳಿಗೆ ತೆರಳಿ ಅಂತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಸೂಚನೆ ಕೊಟ್ಟಿದ್ದಾರೆ. ದಾಖಲೆ ಪರಿಶೀಲನೆಗೆ ಏಕಕಾಲಕ್ಕೆ ಆಹ್ವಾನಿಸಿದ್ದ ಕೆಇಎ ಈಗ ನಿರ್ಧಾರ ಬದಲಾಯಿಸಿದೆ.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಪ್ರತಿಭಟನೆ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಕೋಲಾರ ನಗರದ ಕಾಲೇಜು ಸರ್ಕಲ್​ನಲ್ಲಿ ವಿಭಿನ್ನ ಧರಣಿ ಮಾಡಲಾಗಿದೆ. ಬೂಟ್ ಪಾಲಿಷ್, ಬಜ್ಜಿ ಬೋಂಡಾ, ಟೀ ಮಾರಿ ಪ್ರತಿಭಟನೆ ನಡೆಸಲಾಗಿದೆ. ಕಾಯಂಗೊಳಿಸಿ ಅಥವಾ ವಜಾಮಾಡಿ ಎಂದು ಪ್ರತಿಭಟನೆ ಮಾಡಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿ‌ ಅತಿಥಿ ಉಪನ್ಯಾಸಕರು ಆಕ್ರೋಶ ಹೊರಹಾಕಿದ್ದಾರೆ.

ಕುಣಿಗಲ್​ನಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಪ್ರತಿಭಟನೆ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್​​ನಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರನ್ನ ನೇಮಿಸುವಂತೆ ವಿದ್ಯಾರ್ಥಿಗಳೇ ಒತ್ತಾಯ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಬೆಳಗಾವಿಯಲ್ಲಿ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು

ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕಿ ಅಸ್ವಸ್ಥ

Published On - 8:54 pm, Wed, 22 December 21

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ