AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2025: ಸಮಾಜ ವಿಜ್ಞಾನದಲ್ಲಿ ಫೇಲ್​​ ಆದ ಟಾಪರ್​​; ಮರುಮೌಲ್ಯಮಾಪನದ ಬಳಿಕ ಬಂತು 96 ಅಂಕ

10ನೇ ತರಗತಿಯ ವಿದ್ಯಾರ್ಥಿನಿ ತೇಜಸ್ವಿನಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರೂ ಕೂಡ, ಸಮಾಜ ವಿಜ್ಞಾನದಲ್ಲಿ 23 ಅಂಕಗಳನ್ನು ಪಡೆದು ಅನುತ್ತೀರ್ಣಳಾಗಿದ್ದಳು. ಇದರಿಂದಾಗಿ ಕುಸಿದು ಹೋಗಿದ್ದ ಬಾಲಕಿಗೆ ಪೋಷಕರು ಧೈರ್ಯ ಹೇಳಿ ಮರುಮೌಲ್ಯಮಾಪನಕ್ಕೆ ಕಳುಹಿಸಿದ್ದಾರೆ. ಇದೀಗ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು 96 ಅಂಕಗಳನ್ನು ಪಡೆದು ಟಾಪರ್ ಆಗಿದ್ದಾಳೆ.

SSLC Results 2025: ಸಮಾಜ ವಿಜ್ಞಾನದಲ್ಲಿ ಫೇಲ್​​ ಆದ ಟಾಪರ್​​; ಮರುಮೌಲ್ಯಮಾಪನದ ಬಳಿಕ ಬಂತು 96 ಅಂಕ
Re Evaluation
ಅಕ್ಷತಾ ವರ್ಕಾಡಿ
|

Updated on:May 28, 2025 | 10:33 AM

Share

ಆಂಧ್ರಪ್ರದೇಶ: ಕಷ್ಟ ಪಟ್ಟು ಓದಿ ಎಲ್ಲಾ ವಿಷಯಗಳಲ್ಲಿಯೂ ಫುಲ್​​ ಅಂಕ ಪಡೆಯುವ ಮೂಲಕ ಟಾಪರ್​ ಆಗುವ ಕನಸು ಕಂಡಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷಾ ಫಲಿತಾಂಶ ಕಂಡು ಶಾಕ್​ ಆಗಿದೆ. ಟಾಪರ್​ ಆಗಬೇಕಿದ್ದ ಬಾಲಕಿ ಸಮಾಜ ವಿಜ್ಞಾನದಲ್ಲಿ ಫೇಲ್ ಆಗಿದ್ದಾಳೆ. ಬಳಿಕ ಮರುಮೌಲ್ಯಮಾಪನಕ್ಕೆ ಕಳುಹಿಸಿದ್ದು ಇದೀಗ 96 ಅಂಕಗಳನ್ನು ಪಡೆದುಕೊಂಡಿದ್ದಾಳೆ. ಮೌಲ್ಯಮಾಪಕರ ನಿರ್ಲಕ್ಷ್ಯಕ್ಕೆ ಬಾಲಕಿಯ ಪೋಷಕರು ಸೇರಿದಂತೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯ ತೇಜಸ್ವಿನಿ.

ಐದು ವಿಷಯಗಳಲ್ಲಿ 90 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದ ತೇಜಸ್ವಿನಿ ಸಮಾಜ ವಿಜ್ಞಾನದಲ್ಲಿ ಅನುತ್ತೀರ್ಣಳಾಗಿದ್ದಾಳೆ. ಸಮಾಜ ವಿಜ್ಞಾನದಲ್ಲಿ ಕೇವಲ 23 ಅಂಕಗಳನ್ನು ಕಂಡು ಈಕೆ ಕುಸಿದು ಹೋಗಿದ್ದಾಳೆ. ಮಗಳ ಸ್ಥಿತಿ ಕಂಡು ಪೋಷಕರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದು, ಬಳಿಕ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಇತ್ತೀಚಿಗಷ್ಟೇ ಮರುಮೌಲ್ಯಮಾಪನದ ಫಲಿತಾಂಶ ಹೊರ ಬಿದಿದ್ದು, ಫೇಲ್​​ ಆದ ತೇಜಸ್ವಿನಿ 96 ಅಂಕಗಳನ್ನು ಪಡೆಯುವ ಮೂಲಕ ಟಾಪರ್​​ ಆಗಿ ಮಿಂಚಿದ್ದಾಳೆ. ಇದೀಗ ಆಕೆಗೆ 575 ಅಂಕಗಳು ಬಂದಿವೆ.

ಇದನ್ನೂ ಓದಿ: ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್​ ಬಂದ ಇಬ್ಬರು ‌ವಿದ್ಯಾರ್ಥಿನಿಯರು: ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ತಪ್ಪಿದ ಅವಕಾಶ:

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ, ಮೊದಲು ಅನುತ್ತೀರ್ಣ ಅಂಕಗಳನ್ನು ನೀಡಲಾಯಿತು, ಮತ್ತು ನಂತರ ಮರುಮೌಲ್ಯಮಾಪನದಲ್ಲಿ 96 ಅಂಕಗಳನ್ನು ನೀಡಲಾಯಿತು. ಈ ಮಧ್ಯೆ, ಟ್ರಿಪಲ್ ಐಟಿಗೆ ಅರ್ಜಿ ಸಲ್ಲಿಸುವ ಗಡುವು ಮುಗಿದಿದೆ ಎಂದು ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈ ಅಂಕಗಳೊಂದಿಗೆ ಅವಳಿಗೆ ಸೀಟು ಸಿಗುವ ಅವಕಾಶವಿದೆ ಎಂದು ನಂಬಿರುವ ಶಿಕ್ಷಕರು, ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 am, Wed, 28 May 25

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು