NEET UG 2021: ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

| Updated By: ganapathi bhat

Updated on: Oct 04, 2021 | 5:18 PM

ನೀಟ್ ಯುಜಿ 2021: 7.5 ಲಕ್ಷದಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿರುವ ಪರೀಕ್ಷೆಯ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ಐದು ಎಫ್​ಐಆರ್​ಗಳನ್ನು ಪರಿಗಣಿಸಿ ಈ ಅರ್ಜಿ ಪರಿಗಣಿಸಲು ಆಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

NEET UG 2021: ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್​
Follow us on

ದೆಹಲಿ: ಈ ಬಾರಿಯ ನೀಟ್ ಯುಜಿ (National Eligibility cum Entrance Test undergraduate exam -NEET UG) ಪರೀಕ್ಷೆಯನ್ನು ರದ್ದುಗೊಳಿಸುವ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. 2021ರ ಸಪ್ಟೆಂಬರ್ 12 ರಂದು ನಡೆದ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ನ್ಯಾ. ಎಲ್. ನಾಗೇಶ್ವರ ರಾವ್ ಹಾಗೂ ಬಿಆರ್ ಗವಾಯ್ ಅವರ ನ್ಯಾಯಪೀಠ ತಿರಸ್ಕರಿಸಿದೆ. ಈ ಅರ್ಜಿ ಸಲ್ಲಿಸಿರುವ ಬಗ್ಗೆ ನ್ಯಾಯವಾದಿಗಳನ್ನು ಪ್ರಶ್ನಿಸಿದೆ.

ಯಾವ ರೀತಿಯ ರಿಟ್ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ? ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ. 7.5 ಲಕ್ಷದಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿರುವ ಪರೀಕ್ಷೆಯ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ಐದು ಎಫ್​ಐಆರ್​ಗಳನ್ನು ಪರಿಗಣಿಸಿ ಈ ಅರ್ಜಿ ಪರಿಗಣಿಸಲು ಆಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಪರೀಕ್ಷೆ ನಕಲು, ವಂಚನೆ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಸಿ ನೀಟ್ ಪರೀಕ್ಷಾರ್ಥಿ ಸಲೋನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕೂಡಲೇ ಸುಪ್ರೀಂ ಕೋರ್ಟ್ ಅಸಮ್ಮತಿಯನ್ನು ತೋರಿದೆ. ಈ ಅರ್ಜಿ ಸಲ್ಲಿಸಲು ಸಲಹೆ ನೀಡಿರುವ ನ್ಯಾಯವಾದಿಗೆ ಕೂಡ ದಂಡ ವಿಧಿಸುವುದಾಗಿ ಕೋರ್ಟ್ ಹೇಳಿದೆ. 5 ಲಕ್ಷ ರೂಪಾಯಿ ದಂಡ ವಿಧಿಸಿರುವ ಕೋರ್ಟ್, ಅದನ್ನು ಅರ್ಜಿದಾರನಿಂದ ಅಲ್ಲ, ಬದಲಾಗಿ ನ್ಯಾಯವಾದಿಗಳಿಂದ ಭರಿಸಬೇಕು ಎಂದೂ ಹೇಳಿದೆ.

ಅರ್ಜಿದಾರನನ್ನು ಪ್ರತಿನಿಧಿಸಿದ ವಕೀಲ ನಿನಾದ್ ಡೊಗ್ರ, ದಂಡ ವಿಧಿಸಬಾರದು ಎಂದು ಕೇಳಿಕೊಂಡಿದ್ದಾರೆ. ಆ ಬಳಿಕ, ಕೋರ್ಟ್ ದಂಡವನ್ನು ಹಿಂತೆಗೆದುಕೊಂಡಿದೆ. ಈ ಬಾರಿ ದಂಡ ಹಿಂತೆಗೆದುಕೊಳ್ಳಲಾಗಿದೆ. ಆದರೆ, ಮುಂದೆ ಇಂತಹ ಪ್ರಕರಣಗಳು ಇದ್ದರೆ ಖಂಡಿತಾ ದಂಡ ಹಾಕುತ್ತೇವೆ ಎಂದು ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಯಾರ ವಿರುದ್ಧ ನಿಮ್ಮ ಪ್ರತಿಭಟನೆ: ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆಯ ಔಚಿತ್ಯವನ್ನೇ ಪ್ರಶ್ನಿಸಿದ ಸುಪ್ರೀಂಕೋರ್ಟ್

ಇದನ್ನೂ ಓದಿ: ಕೊರೊನಾಗೆ ಬಲಿಯಾದ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ