AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC on Karnataka Board Exams: 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಆದೇಶ

Supreme court on Karnataka Half Year Board Exam: 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್​ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್​ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ವೇಳೆ ಪೀಠ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

SC on Karnataka Board Exams: 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಆದೇಶ
ಸುಪ್ರೀಂಕೋರ್ಟ್
ವಿವೇಕ ಬಿರಾದಾರ
|

Updated on:Oct 21, 2024 | 3:06 PM

Share

ನವದೆಹಲಿ, ಅಕ್ಟೋಬರ್​​ 21: ವಿವಿಧ ತರಗತಿಗಳಿಗೆ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಕರ್ನಾಟಕ ಸರ್ಕಾರವನ್ನು (Karnataka Government) ತರಾಟೆಗೆ ತೆಗೆದುಕೊಂಡಿತು. ಇದೇ ವೇಳೆ ಕರ್ನಾಟಕದ (Karnataka) ಎಲ್ಲ ಜಿಲ್ಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು (8, 9 and 10th Half Year Exam Result) ಮುಂದಿನ ಆದೇಶದವರೆಗೆ ಪ್ರಕಟಿಸದಂತೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8, 9 ಮತ್ತು 10ನೇ ತರಗತಿಗಳಿಗೆ ಪರೀಕ್ಷೆಯನ್ನು ಯಾವುದೇ ಜಿಲ್ಲೆಯಲ್ಲಿ ನಡೆಸದಿದ್ದರೆ, ಆ ಜಿಲ್ಲೆಗಳಲ್ಲಿ ನಡೆಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದರು.

ಇದನ್ನೂ ಓದಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ಶಿಕ್ಷಣದ ಮಾದರಿಯನ್ನು ಬೇರೆ ಯಾವುದೇ ರಾಜ್ಯಗಳು ಅನುಸರಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಏಕೆ ತೊಂದರೆ ನೀಡುತ್ತಿದ್ದೀರಿ? ರಾಜ್ಯ ಸರ್ಕಾರ ಈ ರೀತಿಯಾಗಿ ವರ್ತಿಸಬಾರದು. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಹಿತದ ಬಗ್ಗೆ ಕಾಳಜಿ ಇದ್ದರೆ ದಯವಿಟ್ಟು ಒಳ್ಳೆಯ ಶಾಲೆಗಳನ್ನು ತೆರೆಯಿರಿ ಎಂದು ಪೀಠ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತು.

ರಾಜ್ಯದ ಏಳು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲ ಹಿರಿಯ ದೇವದತ್ತ ಕಾಮತ್ ಪೀಠಕ್ಕೆ ತಿಳಿಸಿದರು. ಇತರ 24 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಪೀಠದ ಗಮನಕ್ಕೆ ತಂದರು. ಈ ವೇಳೆ ಪೀಠ, ನಾಲ್ಕು ವಾರಗಳಲ್ಲಿ ಪರೀಕ್ಷೆಯ ನಿಖರವಾದ ವಿವರಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:17 pm, Mon, 21 October 24

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ