AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು. ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ
ಸಚಿವ ಸುರೇಶ್​ ಕುಮಾರ್​
KUSHAL V
| Edited By: |

Updated on:Oct 07, 2026 | 4:23 PM

Share

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು.

ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ ವರದಿಯನ್ನು ಸಿಎಂ BSYಗೆ ಸಲ್ಲಿಸಿದ್ದರು. ಡಾ.ಸುದರ್ಶನ್​ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಅಭಿಪ್ರಾಯ ಬಗ್ಗೆ ಚರ್ಚೆ ನಡೆಯಿತು ಎಂದು ಸುರೇಶ್​ ಕುಮಾರ್​ ಹೇಳಿದರು.

ಡಿಸೆಂಬರ್​ನಲ್ಲಿ ಹೆಚ್ಚು ಚಳಿ‌ ಇರುತ್ತೆ. ಕೊರೊನಾ ಎರಡನೇ ಅಲೆಯ ಆತಂಕ‌ ಕೂಡಾ ಇದೆ. ಹಾಗಾಗಿ, 1ರಿಂದ 8ನೇ ತರಗತಿವರೆಗೆ ಈ ವರ್ಷ ಶಾಲೆ ಆರಂಭವಿಲ್ಲ ಎಂದು ಸುರೇಶ್​ ಕುಮಾರ್​ ಹೇಳಿದರು. ಜೊತೆಗೆ, ಡಿಸೆಂಬರ್​ನಲ್ಲಿ ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಸಹ ಹೇಳಿದರು. ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳು ನಡೆಯಲಿವೆ. ಚಂದನ ವಾಹಿನಿಯಲ್ಲಿ ಇಂದಿನಿಂದ ಸಂವೇದಾ ಟಿವಿ ಪಾಠ ನಡೆಯಲಿದೆ ಎಂದೂ ಸಹ ಮಾಹಿತಿ ನೀಡಿದರು.

‘ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ’ ಈ ನಡುವೆ, 1ನೇ ತರಗತಿಯಿಂದ ದ್ವಿತೀಯ PUವರೆಗೆ ಕಾಲೇಜು ತೆರೆಯಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು. ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಹೇಳಿದರು.

Published On - 1:14 pm, Mon, 23 November 20

Follow Us
KUSHAL V
KUSHAL V
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?