KARTET Result 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ, ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್ಕಿಸಿ

2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಆನ್​ಲೈನ್​ಲ್ಲಿ ರಿಸಲ್ಟ್ ನೀಡುವ ವಿಧಾನ ಈ ಕೆಳಗಿನಂತಿದೆ ನೋಡಿ

KARTET Result 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ, ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್ಕಿಸಿ
Result
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 14, 2022 | 7:29 PM

ಬೆಂಗಳೂರು: 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು (Teachers Eligibility Test Result 2022) ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಸಕ್ತ ಸಾಲಿನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಒಟ್ಟು ಅಭ್ಯರ್ಥಿಗಳ ಪೈಕಿ ಪತ್ರಿಕೆ -1 ರಲ್ಲಿ 20,070 ಅಭ್ಯರ್ಥಿಗಳು, ಪತ್ರಿಕೆ 2 ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೈ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇನ್ನು ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಅಧಿಕೃತವಾಗಿ ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: TET: ಶಿಕ್ಷಕರ ಅರ್ಹತಾ ಪರೀಕ್ಷೆಯ ಫೈನಲ್ ಕೀ ಉತ್ತರ ಪ್ರಕಟ, ಇಲ್ಲಿದೆ ಪತ್ರಿಕೆ 1, 2ರ ಕೀ ಉತ್ತರಗಳು

ಕಳೆದ ನವೆಂಬರ್‌ 6ರಂದು ರಾಜ್ಯಾದ್ಯಂತ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆದ 2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿತ್ತು. ಬಳಿಕ ನವೆ.ಬರ್ 25ರಂದು ಟಿಇಟಿ ಪರೀಕ್ಷೆಯ ಪತ್ರಿಕೆ 1 ಮತ್ತು ಪತ್ರಿಕೆ 2ರ ಫೈನಲ್ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು.

ಒಟ್ಟು 3, 32,913 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಟಿಟಿ ಪರೀಕ್ಷೆ ಪತ್ರಿಕೆ 1ಕ್ಕೆ 1,54,929 ಅರ್ಜಿಗಳ ಪೈಕಿ 1,40,801 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ರೆ, ಪ್ರತಿಕ್ರೆ-2ಕ್ಕೆ ಬಂದ 2,06,455 ಅರ್ಜಿಗಳಲ್ಲಿ 1,92,112 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇನ್ನು ಅರ್ಜಿ ಹಾಕಿದ್ದ ಒಟ್ಟು 28,471 ಅಭ್ಯರ್ಥಿಗಳು ಕಾರಣಾಂತರಗಳಿಂದ ಪರೀಕ್ಷೆಗೆ ಗೈರಾಗಿದ್ದರು.

ಫಲಿತಾಂಶ ಚೆಕ್‌ ಮಾಡುವ ವಿಧಾನ ಇಂತಿದೆ

* ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ http://www.schooleducation.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.

* ತೆರೆದ ಹೋಮ್ ಪೇಜ್‌ನಲ್ಲಿ ‘KARTET-2022 Results’ ಎಂಬಲ್ಲಿ ಕ್ಲಿಕ್‌ ಮಾಡಿ.

* ಬಳಿಕ ಮತ್ತೊಂದು ಪೇಜ್‌ ಓಪನ್‌ ಆಗುತ್ತದೆ.

* ಈ ಪುಟದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್‌ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿಯನ್ನು ಹಾಕಿ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

* ಫಲಿತಾಂಶ ಓಪನ್ ಆಗುತ್ತದೆ. ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದುಕೊಳ್ಳಬಹುದು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:28 pm, Wed, 14 December 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್