Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ. ಹಾಗಾದ್ರೆ, ಯಾವೆಲ್ಲ ಪಠ್ಯಗಳಿಗೆ ಕತ್ತರಿ ಬೀಳಲಿದೆ ಎನ್ನುವ ವಿವರ ಇಲ್ಲಿದೆ.

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?
Follow us
ರಮೇಶ್ ಬಿ. ಜವಳಗೇರಾ
|

Updated on: Jun 15, 2023 | 9:31 AM

ಬೆಂಗಳೂರು: ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ(textbook revision) ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಪರಿಷ್ಕೃತಗೊಂಡ ಪಠ್ಯದಲ್ಲಿ ಸೇರ್ಪಡೆ ಮಾಡಲಾದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ್ ಹೆಗಡೆವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ವಿದ್ವಾಂಸರಾದ ಬನ್ನಂಜೆ ಗೋಂವಿದಾಚಾರ್ಯ ಅವರ ವಿಚಾರದ ಪಠ್ಯವನ್ನು ಸೇರಿದಂತೆ ಹಲವು ಪಠ್ಯಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಸಭೆಗಳನ್ನು ಮಾಡಿ ಶಿಕ್ಷಣ ಇಲಾಖೆ ಅಂತಿಮ ವರದಿಯನ್ನು ತಯಾರು ಮಾಡಿದೆ. ಹೀಗಾಗಿ ಸೂಲಿಬೆಲೆ, ಬನ್ನಂಜೆ ಗೋಂವಿದಾಚಾರ್ಯ ಮತ್ತು ಬಲಿರಾಮ್ ಹೆಗಡೆವಾರ್ ಪಠ್ಯಗಳಿಗೆ ಕತ್ತರಿ ಬೀಳುವ ಎಲ್ಲಾ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ. ಎನ್‌ಸಿಇಆರ್‌ಟಿ ಸೂಚನೆ ಮೇರೆಗೆ ನಾವು ಹಿಂದೆ ಬದಲಾವಣೆ ಮಾಡಿದ್ದೆವು. ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಒತ್ತಾಯಿಸಿದ್ದಾರೆ.

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ