5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ

5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್
Follow us
| Updated By: Rakesh Nayak Manchi

Updated on: Mar 12, 2024 | 6:30 PM

ಬೆಂಗಳೂರು, ಮಾ.12: 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ (Board exam) ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ತಡೆ ನೀಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಇದನ್ನೂ ಓದಿ: ಬೇಕೆ ಬೇಕು ಗ್ರೇಸ್​ ಮಾರ್ಕ್ಸ್​! ಫಿಸಿಕ್ಸ್ ಪರೀಕ್ಷೆಯಲ್ಲಿ ಪಿಯುಸಿ ಬೋರ್ಡ್ ಎಡವಿತಾ? ವಿದ್ಯಾರ್ಥಿಗಳು, ವಿಷಯ ತಜ್ಞರು ಹೇಳುವುದೇನು?

ಇದನ್ನು ಪ್ರಶ್ನಿಸಿದ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ, ವಾದ ಪ್ರತಿವಾದ ಆಲಿಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಮತ್ತು ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಪರೀಕ್ಷೆಗಳನ್ನು ಮುಂದೂಡಿದ ಶಿಕ್ಷಣ ಇಲಾಖೆ

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ