Supreme Court: ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು; ಸುಪ್ರೀಂ ಕೋರ್ಟ್‌ ಆದೇಶ

ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. 9ನೇ ತರಗತಿಯಿಂದಲ್ಲದೆ, ಚಿಕ್ಕ ವಯಸ್ಸಿನಿಂದಲೇ ಪಠ್ಯಕ್ರಮದಲ್ಲಿ ಲೈಂಗಿಕ ಶಿಕ್ಷಣ ಸೇರಿಸಬೇಕೆಂದು ಪೀಠ ಹೇಳಿದೆ. ಮಕ್ಕಳ ದೇಹದಲ್ಲಿ ಆಗುವ ಹಾರ್ಮೋನ್ ಬದಲಾವಣೆಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ತಿಳಿಯಲು ಇದು ಅತ್ಯಗತ್ಯ. ಮಾನಸಿಕ ತಜ್ಞರು ಕೂಡ ಈ ಕ್ರಮವನ್ನು ಬೆಂಬಲಿಸಿದ್ದಾರೆ.

Supreme Court: ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು; ಸುಪ್ರೀಂ ಕೋರ್ಟ್‌ ಆದೇಶ
ಲೈಂಗಿಕ ಶಿಕ್ಷಣ

Updated on: Oct 11, 2025 | 12:59 PM

ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೆ, ಸಾಕಷ್ಟು ಜನರು ಇದನ್ನು ವಿರೋಧಿಸಿದ್ದಾರೆ. ಆದಾಗ್ಯೂ, ಅನೇಕ ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ ನಡುವೆ, ಇದೀಗ ಸುಪ್ರೀಂ ಕೋರ್ಟ್ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವ ಮಹತ್ವದ ಬಗ್ಗೆ ಪ್ರಮುಖವಾದ ಆದೇಶವನ್ನು ಹೊರಡಿಸಿದೆ. 9 ನೇ ತರಗತಿಯಿಂದ ಪ್ರಾರಂಭಿಸುವ ಬದಲು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಶಾಲಾ ಪಠ್ಯಕ್ರಮದಲ್ಲಿ ಲೈಂಗಿಕ ಶಿಕ್ಷಣ ಸೇರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಕ್ಕಳಲ್ಲಿ ಹಾರ್ಮೋನುಗಳ ಬದಲಾವಣೆಗಳ ಬಗ್ಗೆ ಅರಿವು:

ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಬಗ್ಗೆ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಆರಾಧೆ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಈ ಹೇಳಿಕೆ ನೀಡಿದೆ. “ಒಂಬತ್ತನೇ ತರಗತಿಯಿಂದಲ್ಲ, ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು ” ಎಂದು ಪೀಠ ಹೇಳಿದೆ. ಪ್ರೌಢಾವಸ್ಥೆಯ ನಂತರ ಅವರ ದೇಹದಲ್ಲಿ ಆಗುವ ಬದಲಾವಣೆಗಳು ಮತ್ತು ಅವರು ತೆಗೆದುಕೊಳ್ಳಬೇಕಾದ ಕಾಳಜಿ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಮಕ್ಕಳಿಗೆ ತಿಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ತೆಗೆದುಕೊಳ್ಳುವುದು ಜವಾಬ್ದಾರಿಯಾಗಿದೆ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ತಂದೆ ಮತ್ತು ಗೆಳೆಯನಿಂದ ಪದೇ ಪದೇ ಅತ್ಯಾಚಾರ, 3 ಬಾರಿ ಗರ್ಭಪಾತ

ಪ್ರೌಢಾವಸ್ಥೆಯೊಂದಿಗೆ ಉಂಟಾಗುವ ಹಾರ್ಮೋನುಗಳ ಬದಲಾವಣೆಗಳ ಬಗ್ಗೆ ಮಕ್ಕಳು ಮತ್ತು ಹದಿಹರೆಯದವರಿಗೆ ಅರಿವು ಮೂಡಿಸಲು ಲೈಂಗಿಕ ಶಿಕ್ಷಣವು ಪ್ರೌಢಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಬೇಕು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 6 (ತೀವ್ರ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ 15 ವರ್ಷದ ಬಾಲಾಪರಾಧಿಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಂ ಕೋರ್ಟ್ ಈ ಅಭಿಪ್ರಾಯಗಳನ್ನು ನೀಡಿದೆ. ಆರೋಪಿಯನ್ನು ಅಪ್ರಾಪ್ತ ವಯಸ್ಕ ಎಂದು ಘೋಷಿಸಿದ ಸುಪ್ರೀಂ ಕೋರ್ಟ್, ಬಾಲ ನ್ಯಾಯ ಮಂಡಳಿಯು ನಿಗದಿಪಡಿಸಿದ ಷರತ್ತುಗಳಿಗೆ ಒಳಪಟ್ಟು ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ದೇಶಿಸಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Sat, 11 October 25