ಭಾರತೀಯರಲ್ಲಿ ಹೆಚ್ಚುತ್ತಿರುವ ಪೌಷ್ಟಿಕಾಂಶ ಕೊರತೆ; ಪೌಷ್ಟಿಕ ಶಿಕ್ಷಣ ಪ್ರಾಮುಖ್ಯತೆಯನ್ನು ತಿಳಿಯಿರಿ

ಆರೋಗ್ಯಕರ ಆಹಾರ ಪದ್ಧತಿಗಳನ್ನು ಸಾಧಿಸಲು, ಶಾಲೆಗಳು, ಸಮುದಾಯ ಕೇಂದ್ರಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ಸಮಗ್ರ ಪೌಷ್ಟಿಕಾಂಶದ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಬೇಕು.

ಭಾರತೀಯರಲ್ಲಿ ಹೆಚ್ಚುತ್ತಿರುವ ಪೌಷ್ಟಿಕಾಂಶ ಕೊರತೆ; ಪೌಷ್ಟಿಕ ಶಿಕ್ಷಣ ಪ್ರಾಮುಖ್ಯತೆಯನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
ನಯನಾ ಎಸ್​ಪಿ
|

Updated on: Aug 08, 2023 | 3:53 PM

ಇಂದಿನ ಮಾಹಿತಿ-ಸಮೃದ್ಧ ಜಗತ್ತಿನಲ್ಲಿ, ಭಾರತದಲ್ಲಿ ಪೌಷ್ಟಿಕಾಂಶ ಶಿಕ್ಷಣದ (Nutritional Education) ಮಹತ್ವವನ್ನು ಕಡೆಗಣಿಸಬಾರದು. ಆಹಾರ ಪದ್ಧತಿಗಳು, ಜೀವನಶೈಲಿ-ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಶಿಕ್ಷಣದ ಮೂಲಕ ಜನರನ್ನು ಸಬಲೀಕರಣಗೊಳಿಸುವುದು ಅತಿಮುಖ್ಯವಾಗಿದೆ. ಸೂಕ್ತವಾದ ಪೋಷಣೆಯು ಅತ್ಯುತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಕಳಪೆ ಪೋಷಣೆಯು ದೀರ್ಘಾವಧಿಯ ಆರೋಗ್ಯ ಅಸ್ವಸ್ಥತೆಗಳಿಗೆ ಕಾರಣವಾಗಬಹುದು.

ಭಾರತವು ತನ್ನ ವೈವಿಧ್ಯಮಯ ಅಡುಗೆಗಳಿದ್ದರೂ, ಪೌಷ್ಠಿಕಾಂಶ-ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದೆ. ಇದೀಗ ಭಾರತಕ್ಕೆ ಮಕ್ಕಳ ಪೋಷಣೆಯು ಗಮನಾರ್ಹ ಕಾಳಜಿಯಾಗಿದೆ. ವಯಸ್ಸು, ಲಿಂಗ ಮತ್ತು ಜೀವನಶೈಲಿಗೆ ಸೂಕ್ತವಾದ ಪೋಷಣೆಯ ಬಗ್ಗೆ ಅರಿವಿನ ಕೊರತೆಯು ಅಸಮತೋಲಿತ ಆಹಾರ ಮತ್ತು ಕಳಪೆ ಆರೋಗ್ಯ ಫಲಿತಾಂಶಗಳಿಗೆ ಕಾರಣವಾಗುತ್ತದೆ.

ಪೌಷ್ಠಿಕ ಶಿಕ್ಷಣವು ರಾಷ್ಟ್ರವ್ಯಾಪಿ ಆಹಾರ ಪದ್ಧತಿಗಳನ್ನು ಪರಿವರ್ತಿಸುವ ಕೀಯನ್ನು ಹೊಂದಿದೆ. ಅರಿವು ಮೂಡಿಸುವ ಮತ್ತು ಜ್ಞಾನವನ್ನು ನೀಡುವ ಮೂಲಕ, ಇದು ಜನರು ತಮ್ಮ ಆಹಾರ ಪದ್ಧತಿ ಮತ್ತು ಒಟ್ಟಾರೆ ಯೋಗಕ್ಷೇಮದಲ್ಲಿ ಧನಾತ್ಮಕ ಬದಲಾವಣೆಗಳನ್ನು ಮಾಡಲು ಸಹಾಯಕವಾಗುತ್ತದೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಆರೋಗ್ಯಕರ ಆಹಾರದ ಪ್ರಾಮುಖ್ಯತೆಯನ್ನು ಕಳಿಸಬಹುದು, ಆಹಾರ-ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ನಿಮ್ಮ ಮಗುವಿಗೆ ಸರಿಯಾದ ಶಾಲೆಯನ್ನು ಆಯ್ಕೆ ಮಾಡಲು ಟಾಪ್ 7 ಸಲಹೆಗಳು

ಆರೋಗ್ಯಕರ ಆಹಾರ ಪದ್ಧತಿಗಳನ್ನು ಸಾಧಿಸಲು, ಶಾಲೆಗಳು, ಸಮುದಾಯ ಕೇಂದ್ರಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ಸಮಗ್ರ ಪೌಷ್ಟಿಕಾಂಶದ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಬೇಕು. ಪೌಷ್ಟಿಕಾಂಶದ ಕುರಿತು ತಿಳುವಳಿಕೆ ಮೂಡಿಸುವ ಮೂಲಕ, ಜಾಗೃತಿಯನ್ನು ಉತ್ತೇಜಿಸುವ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಪೋಷಿಸಬಹುದು. ಪೌಷ್ಠಿಕ ಶಿಕ್ಷಣದ ಮೂಲಕ ಜನರನ್ನು ಸಬಲೀಕರಣಗೊಳಿಸುವುದು ವೈಯಕ್ತಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸಲು ಸಹಾಯಕವಾಗುತ್ತದೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್