AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್ಎಲ್​ಸಿ ಪರೀಕ್ಷೆ: ಮೊದಲ ಪರೀಕ್ಷೆ ದಿನವೇ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಸಾವು

SSLC Exams: ಕರ್ನಾಟಕದಲ್ಲಿ ಇಂದಿನಿಂದ ಎಸ್​ಎಸ್​ಎಲ್​ಸಿ (10ನೇ ತರಗತಿ) ಪರೀಕ್ಷೆಗಳು ಪ್ರಾರಂಭವಾಗಿದ್ದು, ಮೊದಲ ಪರೀಕ್ಷೆ ದಿನವೇ ಒಟ್ಟು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರೆ, ತುಮಕೂರಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ. ಇನ್ನು ಮತ್ತೋರ್ವ ವಿದ್ಯಾರ್ಥಿ ಪರೀಕ್ಷೆ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂರು ಸುದ್ದಿ ವಿವರ ಈ ಕೆಳಗಿನಂತಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ:  ಮೊದಲ ಪರೀಕ್ಷೆ ದಿನವೇ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಸಾವು
ಮೋಹನ್ ಕುಮಾರ್, ಪರಶುರಾಮ್ ಬಾಬು, ಉಮ್ಮೆ ಕೂಲ್ಸುಂ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 25, 2024 | 8:24 PM

Share

ತುಮಕೂರು, (ಮಾರ್ಚ್ 25): ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam)  ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student)  ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಸಿ.ಎಸ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಮೋಹನ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ದುರದೃಷ್ಟವಶಾತ್ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ , ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದ.ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ತುರುವೇಕೆರೆ ಪಟ್ಟಣದ ಸರಸ್ವತಿ ಬಾಲಕರ ಪ್ರೌಢ ಶಾಲೆಗೆ ಬಂದಿದ್ದಾನೆ. ಆದ್ರೆ, ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು, ಬಳಿಕ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯವಂತೆ ವೈದ್ಯರು ಸೂಚಿಸಿದ್ದಾರೆ. ಅದರಂತೆ ಅಂಬ್ಯುಲೆನ್ಸ್​ನಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ, ಗುಬ್ಬಿ ಸಮೀಪ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಪರೀಕ್ಷೆ ದಿನವೇ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಪರೀಕ್ಷಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ (SSLC Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಶಿವಮೊಗ್ಗ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ವಿದ್ಯಾರ್ಥಿ. ರಸ್ತೆ ದಾಟುವ ವೇಳೆ ವಿದ್ಯಾರ್ಥಿಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ