AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Knowledge: ವಿಶ್ವದಲ್ಲೇ ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್​​ 10 ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆ ಎಷ್ಟನೇ ಸ್ಥಾನ?

ಇತ್ತೀಚಿಗಷ್ಟೇ ವಿಶ್ವದಲ್ಲೇ ಅತಿ ಹೆಚ್ಚು ಪುಸ್ತಕಗಳನ್ನು ಪ್ರಕಟಿಸುವ ಟಾಪ್ 10 ದೇಶಗಳ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ವಾರ್ಷಿಕವಾಗಿ ಅತೀ ಹೆಚ್ಚು ಅಂದರೆ 275,000 ಕ್ಕೂ ಪುಸ್ತಕವನ್ನು ಪ್ರಕಟಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಮೊದಲ ಸ್ಥಾನವನ್ನು ಪಡೆದಿದೆ. ನಂತರ ಚೀನಾ ಮತ್ತು ಯುನೈಟೆಡ್ ಕಿಂಗ್‌ಡಮ್. ಭಾರತ 10ನೇ ಸ್ಥಾನದಲ್ಲಿದ್ದು, ಇಲ್ಲಿ 24ಕ್ಕೂ ಹೆಚ್ಚು ಭಾಷೆಗಳಲ್ಲಿ ಪ್ರತೀ ವರ್ಷ 90ಸಾವಿರಕ್ಕೂ ಅಧಿಕ ಪುಸ್ತಕಗಳು ಪ್ರಕಟವಾಗುತ್ತಿದೆ ಎಂದು ತಿಳಿದುಬಂದಿದೆ.

Knowledge: ವಿಶ್ವದಲ್ಲೇ ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್​​ 10 ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆ ಎಷ್ಟನೇ ಸ್ಥಾನ?
ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್​​ 10 ದೇಶ
ಅಕ್ಷತಾ ವರ್ಕಾಡಿ
|

Updated on: Jul 26, 2025 | 2:05 PM

Share

ಪುಸ್ತಕಗಳು ಮನುಷ್ಯನ ಶ್ರೇಷ್ಠ ಸ್ನೇಹಿತ ಇದ್ದಂತೆ, ಅವು ಜ್ಞಾನ, ಮಾಹಿತಿ ಮತ್ತು ಸ್ಫೂರ್ತಿಯ ಮೂಲವಾಗಿವೆ. ಜಾಗತೀಕರಣದ ಹಾವಳಿಯಲ್ಲಿಯೂ ಜನರಲ್ಲಿ ಪುಸ್ತಕ ಪ್ರೀತಿ ಕಡಿಮೆಯಾಗಿಲ್ಲ. ಇದೀಗ ವರದಿಯೊಂದು ಬಿಡುಗಡೆಯಾಗಿದ್ದು, ಪುಸ್ತಕಗಳನ್ನು ಮುದ್ರಿಸುವ ಟಾಪ್​ ಹತ್ತು ದೇಶಗಳ ಬಗ್ಗೆ ಇದು ಬಹಿರಂಗಪಡಿಸಿದೆ. ಇದರಲ್ಲಿ ಭಾರತವು 10ನೇ ಸ್ಥಾನದಲ್ಲಿದ್ದು, ಪ್ರತಿ ವರ್ಷ ಭಾರತದಲ್ಲಿ 24 ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 90,000 ಪುಸ್ತಕಗಳು ಪ್ರಕಟವಾಗುತ್ತವೆ ಎಂದು ತಿಳಿದುಬಂದಿದೆ.

ಭಾರತವು ಡಿಜಿಟಲ್ ಜಗತ್ತಿನಲ್ಲಿ ಮಾತ್ರವಲ್ಲದೆ ಮುದ್ರಿತ ಪದಗಳ ಜಗತ್ತಿನಲ್ಲಿಯೂ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ತೋರಿಸುತ್ತದೆ. ಈ ಪಟ್ಟಿಯಲ್ಲಿ ವಾರ್ಷಿಕವಾಗಿ ಅತೀ ಹೆಚ್ಚು ಅಂದರೆ 275,000 ಕ್ಕೂ ಪುಸ್ತಕವನ್ನು ಪ್ರಕಟಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಮೊದಲ ಸ್ಥಾನವನ್ನು ಪಡೆದಿದೆ.

ಟಾಪ್ 10 ರಲ್ಲಿ ಯಾವ ದೇಶಗಳಿವೆ?

  1. ಅಮೆರಿಕ
  2. ಚೀನಾ
  3. ಯುನೈಟೆಡ್ ಕಿಂಗ್‌ಡಮ್
  4. ರಷ್ಯಾ
  5. ಜರ್ಮನಿ
  6. ಇಟಲಿ
  7. ಫ್ರಾನ್ಸ್
  8. ಜಪಾನ್
  9. ಇರಾನ್
  10. ಭಾರತ

ಇದನ್ನೂ ಓದಿ: ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಯಾವುದು ಗೊತ್ತಾ?

ವಿಶ್ವದ ಗರಿಷ್ಠ ಸಂಖ್ಯೆಯ ಪುಸ್ತಕಗಳನ್ನು ಮುದ್ರಿಸುವ ದೇಶಗಳಲ್ಲಿ ಭಾರತವೂ ಸೇರಿರುವುದು ಹೆಮ್ಮೆಯ ವಿಷಯ. ಭಾರತದ ಅತ್ಯಂತ ವಿಶೇಷವೆಂದರೆ ಪುಸ್ತಕಗಳನ್ನು ಇಂಗ್ಲಿಷ್‌ನಲ್ಲಿ ಮಾತ್ರವಲ್ಲದೆ ಹಿಂದಿ, ತಮಿಳು, ಬಂಗಾಳಿ, ಉರ್ದು, ಗುಜರಾತಿ, ತೆಲುಗು ಮುಂತಾದ 24 ಕ್ಕೂ ಹೆಚ್ಚು ಭಾಷೆಗಳಲ್ಲಿ ಮುದ್ರಿಸಲಾಗುತ್ತದೆ. ಭಾರತೀಯ ಓದುಗರ ಒಲವು ಕೇವಲ ಒಂದು ಭಾಷೆಗೆ ಸೀಮಿತವಾಗಿಲ್ಲ ಎಂಬುದನ್ನು ಇಲ್ಲಿ ತಿಳಿಯಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ