TS Inter Results 2022: ಪ್ರಥಮ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟ: ಫಲಿತಾಂಶ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ 2022ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಗಳು ಇಂದು ಪ್ರಕಟಗೊಳ್ಳಲಿದೆ. ಫಲಿತಾಂಶ ಪರಿಶೀಲುವುದು ಹೇಗೆ? ಯಾವುದರಲ್ಲಿ ಪರಿಶೀಲಿಸಬೇಕು? ಇಲ್ಲಿದೆ ಮಾಹಿತಿ.

TS Inter Results 2022: ಪ್ರಥಮ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟ: ಫಲಿತಾಂಶ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jun 28, 2022 | 10:28 AM

ಹೈದರಾಬಾದ್: ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ (TSBIE) 2022ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ(Exam Result)ಗಳು ಇಂದು (ಜೂನ್ 28) ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ tsbie.cgg.gov.in. ನಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ವಿವಿಧ ವೆಬ್​ಸೈಟ್​ಗಳ ಮೂಲಕ ನೋಡಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಗೊಂಡ ವೆಬ್​ಸೈಟ್​ಗಳಿಗೆ ಭೇಟಿ ನೀಡಿದ ನಂತರ ವಿದ್ಯಾರ್ಥಿಗಳು ತಮ್ಮ ಲಾಗ್ ಇನ್ ಆಗಲು ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ಈ ವೇಳೆ ಫಲಿತಾಂಶಗಳು ಕಾಣಿಸಲಿದ್ದು, ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ರಾತ್ರಿ ಪಾಸಾದ ವಿದ್ಯಾರ್ಥಿಗಳು ಬೆಳಗಾಗುವಷ್ಟರಲ್ಲಿ ಫೇಲ್! ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಎಡವಟ್ಟಿಗೆ ವಿದ್ಯಾರ್ಥಿಗಳ ಆಕ್ರೋಶ

ಫಲಿತಾಂಶ ಪರಿಶೀಲಿಸುವ ವೆಬ್​ಸೈಟ್​ಗಳು

  • tsbie.cgg.gov.in
  • results.cgg.gov.in
  • examresults.ts.nic.in
  • manabadi.com
  • results.eenadu.net
  • results.gov.in
  • bse.telangana.gov.in.

ಈ ವರ್ಷ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದು, TSBIEನಿಂದ ಪಾಸ್ ಪ್ರಮಾಣಪತ್ರವನ್ನು ಪಡೆಯಲು ವಿದ್ಯಾರ್ಥಿಗಳು ಕನಿಷ್ಠ 35 ಶೇಕಡಾ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದವರು ಮರು ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.

ಇದನ್ನೂ ಓದಿ: Maharashtra Crisis: ಉದ್ಧವ್ ಠಾಕ್ರೆ ಸರ್ಕಾರಕ್ಕೆ ಬಂಡಾಯದ ಬಿಸಿ; ಶಿಂಧೆ ಬಣದಿಂದ ಅವಿಶ್ವಾಸ ನಿರ್ಣಯ ಮಂಡನೆ?

Published On - 10:28 am, Tue, 28 June 22