ಹೈದರಾಬಾದ್: ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ (TSBIE) 2022ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ(Exam Result)ಗಳು ಇಂದು (ಜೂನ್ 28) ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್‌ಸೈಟ್ tsbie.cgg.gov.in. ನಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ವಿವಿಧ ವೆಬ್ಸೈಟ್ಗಳ ಮೂಲಕ ನೋಡಬಹುದಾಗಿದೆ.
ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಗೊಂಡ ವೆಬ್ಸೈಟ್ಗಳಿಗೆ ಭೇಟಿ ನೀಡಿದ ನಂತರ ವಿದ್ಯಾರ್ಥಿಗಳು ತಮ್ಮ ಲಾಗ್ ಇನ್ ಆಗಲು ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ಈ ವೇಳೆ ಫಲಿತಾಂಶಗಳು ಕಾಣಿಸಲಿದ್ದು, ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ಪರಿಶೀಲಿಸುವ ವೆಬ್ಸೈಟ್ಗಳು
ಈ ವರ್ಷ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದು, TSBIEನಿಂದ ಪಾಸ್ ಪ್ರಮಾಣಪತ್ರವನ್ನು ಪಡೆಯಲು ವಿದ್ಯಾರ್ಥಿಗಳು ಕನಿಷ್ಠ 35 ಶೇಕಡಾ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದವರು ಮರು ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.
ಇದನ್ನೂ ಓದಿ: Maharashtra Crisis: ಉದ್ಧವ್ ಠಾಕ್ರೆ ಸರ್ಕಾರಕ್ಕೆ ಬಂಡಾಯದ ಬಿಸಿ; ಶಿಂಧೆ ಬಣದಿಂದ ಅವಿಶ್ವಾಸ ನಿರ್ಣಯ ಮಂಡನೆ?
Published On - 10:28 am, Tue, 28 June 22